ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ

0
22

ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಈ ಸಂದರ್ಭ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು.