ಅಪರಿಚಿತ ಶವದ ಗುರುತು ಪತ್ತೆ, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ

0
249

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48 ಸಮೀಪದಲ್ಲಿ ಕಂಡುಬಂದ ಅಪರಿಚಿತ ಶವದ ಗುರುತು ಪತ್ತೆಯಾಗಿದ್ದು, ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ ಯುವತಿಯನ್ನು ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂದು ಗುರುತಿಸಲಾಗಿದೆ. ಈಕೆ ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಗುರುತು ಪತ್ತೆಯಾದ ನಂತರ ವರ್ಷಿತಾ ಸಂಪರ್ಕದಲ್ಲಿದ್ದ ಯುವಕ ಚೇತನ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಚೇತನ್‌ಗೆ ಮೂರನೇ ಹಂತದ ಕ್ಯಾನ್ಸರ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here