ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ದೊರೆತಿದೆ. ಸೂರಜ್ ವಿರುದ್ಧದ ಆರೋಪ ಸಂಬಂಧ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.
ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.