ಉಪ್ಪಿನಂಗಡಿ ಸಮೀಪದ ಕಲ್ಲೇರಿ ಪ್ರದೇಶದಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ 5 ವರ್ಷದ ಬಾಲಕಿ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿದೆ.
ತಣ್ಣೀರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ (60) ಅವರು ತಮ್ಮ ಮಗಳು ಸಾಜಿರಾ (33) ಹಾಗೂ ಮೊಮ್ಮಗಳು ಸುಹೈರಾ ಅವರನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಕಾರನ್ನು ವೇಣೂರು ಮೂಲದ ಶಿವಪ್ರಸಾದ್ ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದ ಪರಿಣಾಮ ಸುಹೈರಾ, ಸಾಜಿರಾ ಹಾಗೂ ಇಸ್ಮಾಯಿಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಸುಹೈರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿದೆ.

