ಮಂಗಳೂರಿನ ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ತುರ್ತು ಕ್ರಮ : ಸಚಿವರ ಗಮನ ಸೆಳೆದ ಐವನ್ ಡಿʼಸೋಜಾ

0
6

ವಿಧಾನ ಪರಿಷತ್ತಿನ ಕಲಾಪದಲ್ಲಿ ಶಾಸಕರಾದ ಐವನ್‌ ಡಿʼಸೋಜಾ ರವರು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲ ವ್ಯವಸ್ಥೆಯಲ್ಲಿರುವ ಒಳಚರಂಡಿ ವ್ಯವಸ್ಥೆ ಮತ್ತು 24*7 ನೀರು ಸರಬರಾಜು ಮಾಡುವ ಜಲಸಿರಿ ಯೋಜನೆಗಳು ನೆನೆಗುದಿಗೆ ಬಿದ್ದಿದ್ದು, ಇದನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮತ್ತು ಮಾನ್ಯ ಮಂತ್ರಿಗಳು ಮಂಗಳೂರಿಗೆ ಭೇಟಿ ನೀಡಬೇಕೆಂದು ಸದನದ ಶೂನ್ಯ ವೇಳೆಯಲ್ಲಿ ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಯತಿಂದ್ರ ಸಿದ್ಧರಾಮಯ್ಯ ರವರ ಗಮನ ಸೆಳೆದರು.