ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರದೇಶದಲ್ಲಿ ತುರ್ತು ಸುರಕ್ಷತಾ ಕ್ರಮ ಕೈಗೊಳ್ಳಬೇಕು : ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಆಗ್ರಹ

0
51

ಉಡುಪಿ : ಕಟಪಾಡಿ ಭಾಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ರಸ್ತೆ ಭಾಗವನ್ನು ಆಳವಾಗಿ ಅಗೆಯಲಾಗಿದ್ದು, ಮೇಲ್ಭಾಗದ ರಸ್ತೆಯಲ್ಲಿ ಪ್ರತಿದಿನ ಭಾರೀ ವಾಹನಗಳು, ಬಸ್‌ಗಳು ಹಾಗೂ ಇತರೆ ಘನ ವಾಹನಗಳು ನಿರಂತರವಾಗಿ ಸಂಚಾರ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾದ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ತಿಳಿಸಿದ್ದಾರೆ.

ಈಗಾಗಲೇ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ಪ್ರದೇಶದ ಸುತ್ತಮುತ್ತ ಮಣ್ಣು ಸಡಿಲಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ರಸ್ತೆ ಕುಸಿತ ಅಥವಾ ಭೂಕುಸಿತದಂತಹ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಎದುರಾಗಿದೆ. ಮೇಲ್ಭಾಗದಲ್ಲಿ ವಾಹನ ಸಂಚಾರ ನಡೆಯುತ್ತಿರುವಾಗ ಕೆಳಭಾಗದಲ್ಲಿ ಆಳವಾದ ತೋಡಿಕೆ ಇರುವುದರಿಂದ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ವಿಶೇಷವಾಗಿ ರಾತ್ರಿ ಸಮಯದಲ್ಲಿ ಹಾಗೂ ನಿರಂತರ ಮಳೆಯಿಂದಾಗಿ ರಸ್ತೆ ಬದಿಗಳ ಸ್ಥಿತಿ ಮತ್ತಷ್ಟು ಅಪಾಯಕಾರಿಯಾಗುವ ಸಾಧ್ಯತೆ ಇದೆ. ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳದಿದ್ದಲ್ಲಿ ಸಾರ್ವಜನಿಕರ ಪ್ರಾಣಾಪಾಯ ಸಂಭವಿಸಬಹುದಾಗಿದ್ದು, ಭವಿಷ್ಯದಲ್ಲಿ ಸಂಭವಿಸಬಹುದಾದ ಅನಾಹುತಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಣಾ ಸಂಸ್ಥೆಯೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕಾಮಗಾರಿ ನಿರ್ವಹಣಾ ಸಂಸ್ಥೆಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸುರಕ್ಷತಾ ತಡೆಗೋಡೆ, ಮಣ್ಣು ಜಾರದಂತೆ ಬಲಪಡಿಸುವ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ರಾತ್ರಿ ಬೆಳಕು ವ್ಯವಸ್ಥೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಜೀವ ಭದ್ರತೆ ಯಾವುದೇ ಕಾಮಗಾರಿಗಿಂತ ಮುಖ್ಯವಾಗಿದ್ದು, ಅನಾಹುತ ಸಂಭವಿಸುವುದಕ್ಕಿಂತ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮವಹಿಸುವ ಅಗತ್ಯ ಇದೆ ಎಂದು ಫ್ರ್ಯಾಂಕಿ ಡಿಸೋಜ ಕೊಳಲಗಿರಿ.ತಿಳಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಕಾಮಗಾರಿ ನಿರ್ವಹಣಾ ಸಂಸ್ಥೆಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸುರಕ್ಷತಾ ತಡೆಗೋಡೆ, ಮಣ್ಣು ಜಾರದಂತೆ ಬಲಪಡಿಸುವ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ರಾತ್ರಿ ಬೆಳಕು ವ್ಯವಸ್ಥೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಜೀವ ಭದ್ರತೆ ಯಾವುದೇ ಕಾಮಗಾರಿಗಿಂತ ಮುಖ್ಯವಾಗಿದ್ದು, ಅನಾಹುತ ಸಂಭವಿಸುವುದಕ್ಕಿಂತ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮವಹಿಸುವ ಅಗತ್ಯ ಇದೆ.ವಿಳಂಬ ನೀತಿ ಅನುಸರಿಸಿದಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪುರವರ ನೇತ್ರತ್ವದೊಂದಿಗೆ ಬ್ರಹತ್ ಪ್ರತಿಭಟನಾ ಸಬೆ ನಡೆಸಲಾಗುವುದು ಎಂದು ಫ್ರ್ಯಾಂಕಿ ಡಿಸೋಜ ಕೊಳಲಗಿರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here