ಪಕ್ಷಿಕೆರೆ : ಜಿಲ್ಲಾ ಪ್ರಶಸ್ತಿ ವಿಜೇತ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಮತ್ತು ಶ್ರೀ ವಿನಾಯಕ ಮಹಿಳಾ ಮಂಡಳಿ ಪಕ್ಷಿಕೆರೆ ಇದರ ಜಂಟಿ ಆಶ್ರಯದಲ್ಲಿ My Bharat D.K, Ministry Of Youth Affairs And Sports Govt Of India, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಸಹಯೋಗದಲ್ಲಿ ಭಾರತರತ್ನ, ಮಾಜಿ ಪ್ರಧಾನ ಮಂತ್ರಿ,ಮಹಾನ್ ರಾಷ್ಟ್ರನಾಯಕ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮದಿನಾಚರಣೆ ಕಾರ್ಯಕ್ರಮ ಅಂಬೇಡ್ಕರ್ ಭವನ ಪಕ್ಷಿಕೆರೆ ಯಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊರ್ದಬ್ಬು ದೈವಸ್ಥಾನ ಪಕ್ಷಿಕೆರೆ ಇದರ ಅಧ್ಯಕ್ಷರಾದ ಸತೀಶ್ ಅಮೀನ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಇವರು ಅಟಲ್ ಬಿಹಾರಿ ವಾಜಪೇಯಿಯವರ ಜೀವನ ಮೌಲ್ಯ, ಸಾಧನೆ ಹಾಗೂ ದೇಶಾಭಿಮಾನದ ಬಗ್ಗೆ ವಿಸ್ತೃತವಾಗಿ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಗಣಪತಿ ಆಚಾರ್ಯ ಅಧ್ಯಕ್ಷರು ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ )ಪಕ್ಷಿಕೆರೆ, ಸೇಸಪ್ಪ ಸಾಲಿಯಾನ್ ನಿರ್ದೇಶಕರು ಪಿ.ಸಿ. ಎ ಬ್ಯಾಂಕ್ ಹಳೆಯಂಗಡಿ , ಧನಂಜಯ್ ಪಿ. ಶೆಟ್ಟಿಗಾರ್ ಗೌರವಾಧ್ಯಕ್ಷರು ವಿನಾಯಕ ಮಿತ್ರಮಂಡಳಿ (ರಿ) ಪಕ್ಷಿಕೆರೆ , ಮಂಡಳಿಯ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿಗಾರ್, ಕಾರ್ಯದರ್ಶಿಯಾದ ನಮಿತ್, ಹಾಗೂ ಮಹಿಳಾ ಮಂಡಳಿಯ ಕಾರ್ಯದರ್ಶಿಯಾದ ಸ್ನೇಹಿತ ಪಿ. ಶೆಟ್ಟಿಗಾರ್ ಭಾಗವಹಿಸಿದರು. ಮಂಡಳಿಯ ಸದಸ್ಯರಾದ ನರೇಶ್ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮಂಡಳಿಯ ಸದಸ್ಯೆಯಾದ ಕುಶಲ ಎಸ್ ಕುಕ್ಯಾನ್ ಧನ್ಯವಾದ ಸಮರ್ಪಿಸಿದರು. ಜಂಟಿ ಸಂಸ್ಥೆಯ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .

