
ಬೆಳಗಾವಿ : ದಾಲ್ಮಿಯಾ ಸಿಮೆಂಟ್ (ಭಾರತ್) ಲಿಮಿಟೆಡ್ನ ಸಿಎಸ್ಆರ್ ವಿಭಾಗವಾದ ದಾಲ್ಮಿಯಾ ಭಾರತ್ ಫೌಂಡೇಶನ್ (ಡಿಬಿಎಫ್) ವತಿಯಿಂದ ಮೂಡಲಗಿಯ ದೀಕ್ಷಾ (ದಾಲ್ಮಿಯಾ ಇನ್ಸ್ಟಿಟ್ಯೂಟ್ ಆಫ್ ನಾಲೆಡ್ಜ್ ಅಂಡ್ ಸ್ಕಿಲ್ ಹಾರ್ನೆಸಿಂಗ್) ಕೇಂದ್ರದಲ್ಲಿ ಅಸಿಸ್ಟೆಂಟ್ ಎಲೆಕ್ಟ್ರಿಷಿಯನ್ ತರಬೇತಿ ಪೂರ್ಣಗೊಳಿಸಿದ 30 ವಿದ್ಯಾರ್ಥಿಗಳಿಗೆ ಸಮಾರೋಪ ಹಾಗೂ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಸ್ಥಳೀಯ ಎಂಇಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ವಿದ್ಯುತ್ ಸೇವಾ ಕ್ಷೇತ್ರದಲ್ಲಿ ಯುವಜನರಿಗೆ ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಒದಗಿಸುವ ಮೂಲಕ ಉದ್ಯೋಗಾವಕಾಶ ಮತ್ತು ಸುಸ್ಥಿರ ಜೀವನೋಪಾಯ ಕಲ್ಪಿಸುವ ಉದ್ದೇಶದಿಂದ ತರಬೇತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಪವನ್ ಕುಮಾರ್ ಕೆ., ಬೆಳಗಾವಿ ಡಿಸಿಬಿಎಲ್ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಶರದ್ ಹುರಕಟ್ ಭಾಗವಹಿಸಿ ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು.
ಬೆಳಗಾವಿಯ ದೀಕ್ಷಾ ಕೇಂದ್ರವು ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ವೃತ್ತಿಪರ ತರಬೇತಿ ನೀಡುತ್ತಿದ್ದು, ಆರಂಭದಿಂದ ಇಲ್ಲಿಯವರೆಗೆ 3,500ಕ್ಕೂ ಅಧಿಕ ಯುವಜನರಿಗೆ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ರೂಪಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಡಿಸಿಬಿಎಲ್ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್, ಕೌಶಲ್ಯಾಭಿವೃದ್ಧಿಯು ಯುವಜನರನ್ನು ಕಲಿಕೆಯ ಹಂತದಿಂದ ಜೀವನೋಪಾಯದತ್ತ ಕೊಂಡೊಯ್ಯುವ ಮಹತ್ವದ ಹೆಜ್ಜೆಯಾಗಿದೆ. ಮಾರುಕಟ್ಟೆಯ ಅಗತ್ಯಗಳಿಗೆ ತಕ್ಕ ಪ್ರಾಯೋಗಿಕ ಜ್ಞಾನ ನೀಡಿ, ಸುಸ್ಥಿರ ವೃತ್ತಿಜೀವನ ಕಟ್ಟಿಕೊಳ್ಳುವ ಆತ್ಮವಿಶ್ವಾಸ ಮೂಡಿಸುವುದೇ ದೀಕ್ಷಾ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮೂಡಲಗಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಮುಂದಿನ ವೃತ್ತಿಜೀವನದ ಬೆಳವಣಿಗೆಗೆ ಸದ್ಬಳಕೆ ಮಾಡಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಡಿಬಿಎಫ್ನ ದೀಕ್ಷಾ ಯೋಜನೆಯು ಮುಖ್ಯವಾಗಿ ಹಿಂದುಳಿದ ವರ್ಗಗಳ ಯುವಜನರಿಗೆ ಮಾರುಕಟ್ಟೆ ಆಧಾರಿತ ವೃತ್ತಿಪರ ತರಬೇತಿ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಿದೆ. ಪ್ರಸ್ತುತ ಉದ್ಯೋಗ ಮಾರುಕಟ್ಟೆಗೆ ಅಗತ್ಯವಿರುವ ಕೌಶಲ್ಯಗಳು ಹಾಗೂ ಉದ್ಯಮ ಆಧಾರಿತ ತರಬೇತಿಯನ್ನು ನೀಡುವ ಮೂಲಕ ಯುವಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಲು ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ.
