Friday, February 14, 2025
Homeಶಿಕ್ಷಣರಾಮಕೃಷ್ಣ ಮಠದಲ್ಲಿ ಜನವರಿ 16 ರಂದು ರಾಷ್ಟೀಯ ಯುವ ದಿನದ ಪ್ರಯುಕ್ತ ಮೌಲ್ಯ ಶಿಕ್ಷಣ ಕಾರ್ಯಕ್ರಮ

ರಾಮಕೃಷ್ಣ ಮಠದಲ್ಲಿ ಜನವರಿ 16 ರಂದು ರಾಷ್ಟೀಯ ಯುವ ದಿನದ ಪ್ರಯುಕ್ತ ಮೌಲ್ಯ ಶಿಕ್ಷಣ ಕಾರ್ಯಕ್ರಮ


ನನ್ನ ಭರವಸೆ ಇರುವುದು ಯುವಜನಾಂಗದಲ್ಲಿ, ಆಧುನಿಕ ಯುವಜನಾಂಗದಲ್ಲಿ! ನನ್ನ ಕಾರ್ಯವನ್ನು ಮುಂದುವರಿಸುವವರು ಸಮಾಜದ ನವ ಯುವವರ್ಗದಿಂದ ಎದ್ದುಬರಲಿದ್ದಾರೆ! ಅವರು ರಾಷ್ಟ್ರದ ಸಕಲ ಸಮಸ್ಯೆಗಳನ್ನೂ ಸಿಂಹಪರಾಕ್ರಮದಿಂದ ಪರಿಹರಿಸಲಿದ್ದಾರೆ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಸ್ವಾಮಿ ವಿವೇಕಾನಂದರು ಯುವಕರಿಗೆ ನೀಡಿದ ಚಿಂತನೆಗಳು ಅಪಾರ ಹಾಗೂ ಅದೆಷ್ಟೋ ಯುವಕರಿಗೆ
ಪ್ರೇರೇಣಾದಾಯಿಯಾಗಿದೆ. ಈ ಹಿನ್ನಲೆಯಲ್ಲಿ ಭಾರತ ಸರ್ಕಾರವು 1984 ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟೀಯ ಯುವ ದಿನಾಚರಣೆಯಾಗಿ ಘೋಷಿಸಿತು.
ನಮ್ಮ ಆಶ್ರಮದಲ್ಲಿ ರಾಷ್ಟೀಯ ಯುವ ದಿನದ ಪ್ರಯುಕ್ತ ಮೌಲ್ಯ ಶಿಕ್ಷಣ ಕಾರ್ಯಕ್ರಮವನ್ನು 16 ಜನವರಿ 2025 ಗುರುವಾರದಂದು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9 ಗಂಟೆಗೆ ನಮ್ಮ ಆಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ. ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಗದಗ ಮತ್ತು ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದ ಸರಸ್ವತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಸರಕಾರ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಶ್ರೀ ಆರ್.ವಿ. ದೇಶಪಾಂಡೆ ಅವರು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ವಿಶಾಲ್ ಹೆಗ್ಡೆ ಅವರು ಈ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಭಾರತೀಯ ಸೇನೆಯ ನಿವೃತ್ತ ಯೋಧರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ಈ ಸಂದರ್ಭದಲ್ಲಿ ಶಾರದಾ ದೇವಿ ಅಧ್ಯಯನ ಕೇಂದ್ರ (ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳಿಗೆ ಓದುವ ಕೊಠಡಿ) ದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಮೊದಲನೇ ಅವಧಿಯಲ್ಲಿ ಗದಗ ಮತ್ತು ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ಆಂತರಿಕ ಶಕ್ತಿಯ ಜಾಗೃತಿ – ಯುವಜನತೆಗೆ ಸ್ವಾಮಿ ವಿವೇಕಾನಂದರ ಸಂದೇಶ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಎರಡನೇ ಅವಧಿಯಲ್ಲಿ ಬೆಂಗಳೂರಿನ ಯೂಥ್ ಫಾರ್ಪ ರಿವರ್ತನ್ ಸಂಸ್ಥೆಯ ಅಧ್ಯಕ್ಷರು ಮತ್ತು ಸ್ಥಾಪಕರಾದ ಅಮಿತ್ ಅಮರ್‌ನಾಥ್ ಅವರು ಸೇವೆಯ ಶಕ್ತಿ – ಯುವಜನತೆ ಹೇಗೆ ಉತ್ತಮ ಭವಿಷ್ಯವನ್ನು ರೂಪಿಸಬಹುದು ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಲಿದ್ದಾರೆ.
ನಂತರ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಸ್ವಾಮಿ ನಿರ್ಭಯಾನಂದ ಸರಸ್ವತಿ, ಅಮಿತ್ ಅಮರ್‌ನಾಥ್ ಹಾಗೂ ಮಂಗಳೂರಿನ ಅನಿರ್ವೇದ ಮನೋರೋಗ ಕೇಂದ್ರ ದ ನಿರ್ದೇಶಕಿ ಆಗಿರುವ ಡಾ. ಕೆ.ಟಿ. ಶ್ವೇತಾ ಅವರು ಭಾಗವಹಿಸಲಿದ್ದಾರೆ. ಮಂಗಳೂರು ರಾಮಕೃಷ್ಣ ಮಿಷನ್ ನ ಮುಖ್ಯ ಸಂಯೋಜಕರಾಗಿರುವ ಶ್ರೀ ರಂಜನ್ಬೆ ಳ್ಳರ್ಪಾಡಿ ಅವರು ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ. ಮಂಗಳೂರಿನ ಸುತ್ತಮುತ್ತಲಿನ ಕಾಲೇಜುಗಳಿಂದ ಸುಮಾರು 600ಕ್ಕೂ ಹೆಚ್ಚು ಯುವಕ-ಯುವತಿಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಈ ಕಾರ್ಯಕ್ರಮಕ್ಕೆ ಆಸಕ್ತರು ಮುಂಚಿತವಾಗಿ 8105356290 ಸಂಖ್ಯೆಗೆ ಹೆಸರು ನೋಂದಾಯಿಸಬಹುದು ಎಂದು ಪ್ರಕಟಣೆಗೆ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular