ಮೂಡುಬಿದಿರೆ: ಕಡಂದಲೆ ಗ್ರಾಮದ ವಿದ್ಯಾಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ಶನಿವಾರ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಕೆಎಂಎಫ್ ನಿರ್ದೇಶಕ ಕೆ.ಪಿ ಸುಚರಿತ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಂಗಳೂರು ಸಾಮಾಜಿಕ ಹಾಗೂ ಪ್ರಾದೇಶಿಕ ಅರಣ್ಯ ವಲಯದ ಮೂಡುಬಿದಿರೆ ಘಟಕದ ಉಪ ವಲಯರಣ್ಯಾಧಿಕಾರಿ ಆನಂದ್, ಮೂಡುಬಿದಿರೆ ವಲಯದ ಗಸ್ತು ಅರಣ್ಯ ಪಾಲಕರು ಚಂದ್ರಶೇಖರ್, ರಾಜೇಶ್.ಕೆ, ಅರಣ್ಯ ವೀಕ್ಷಕರಾದ ರಂಜನ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಪ್ರಣೀತಾ ನಾಗೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ ಪೂಪಾಡಿಕಲ್ಲು, ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ, ಶಿಕ್ಷಕರಾದ ಸತೀಶ್ ಶೆಟ್ಟಿ, ಪೌಲಿನ್ ಪಿಂಟೋ, ಸುಮನಾ ಎಚ್.ಸಿ., ಅಂಗನವಾಡಿ ಕಾರ್ಯಕರ್ತೆ ಬೆನಡಿಕ್ಟಾ ದಾಂತಿಸ್ ಉಪಸ್ಥಿತರಿದ್ದರು.