Sunday, July 14, 2024
Homeರಾಜ್ಯಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ವನಮಹೋತ್ಸವ ಕಾರ್ಯಕ್ರಮ

ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ವನಮಹೋತ್ಸವ ಕಾರ್ಯಕ್ರಮ

ಮುಲ್ಕಿ : ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ವಿಶ್ವ ಪರಿಸರದ ದಿನದ ಅಂಗವಾಗಿ ಹಮ್ಮಿಕೊಳ್ಳಲಾಯಿತು. ಭಾರತ ದೇಶದಲ್ಲಿ ಮರ ಗಿಡಗಳಿಗೆ ವಿಶೇಷ ಪ್ರಾಶಸ್ತ್ಯ ಮನ್ನಣೆ ನೀಡಲಾಗುತ್ತಿದೆ. ವೃಕ್ಷಗಳನ್ನು ದೇವರ ಸಮಾನ ಎಂದು ಆರಾಧಿಸುತ್ತೇವೆ. ಇಂತಹ ಮಹತ್ವವುಳ್ಳ ಮರಗಳನ್ನು ನೀಡುವುದರಿಂದ ಪರಿಸರ ಸುಂದರವಾಗುವುದಲ್ಲದೆ ಪರಿಸರವನ್ನು ಸಂರಕ್ಷಿಸಿದ ಹೆಗ್ಗಳಿಕೆ ನಮ್ಮದಾಗುತ್ತದೆ ಎಂದು ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ. ರಾವ್ ಹೇಳಿದರು. ಮನೆಗೊಂದು ಮರ ದೇಶದ ಹಿತಕ್ಕೆ ವರ ಎನ್ನುವ ಘೋಷಣೆಯ ಮೂಲಕ ವಿದ್ಯಾರ್ಥಿಗಳು ಶಾಲಾ ಪರಿಸರದ ಸುತ್ತಮುತ್ತ ಗಿಡಗಳನ್ನು ನೆಟ್ಟು, ಸ್ವಚ್ಛತಾ ಕಾರ್ಯಕ್ರಮವನ್ನು ಶಾಲಾ ಪರಿಸರದಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಪ್ರಜ್ವಲ, ಶರ್ಮಿಳ, ವನಿತಾ, ಕಾಂತಿ, ನಿಶ್ಮಿತ, ವೀಣಾ, ದೀಪಿಕಾ, ಶ್ರೀಲತಾ, ದೀಪ, ಐಶ್ವರ್ಯ ಹಾಗೂ ವಿದ್ಯಾರ್ಥಿಗಳ ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular