ಶಾಲೆಗಳು, ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ

0
36

ಪುತ್ತೂರು : ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಫೆ.11ರಂದು ಆದೇಶ ಹೊರಡಿಸಿದೆ.

ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಶಾಲೆಗಳಲ್ಲಿ ರಾಷ್ಟ್ರಗೀತೆಗೂ ಮೊದಲು ‘ವಂದೇ ಮಾತರಂ’ನ 6 ಚರಣಗಳನ್ನು ಹಾಡಬೇಕು. ಹಾಗೆಯೇ ಗೀತೆಯನ್ನು ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

2025ರ ಡಿಸೆಂಬರ್‌ನಲ್ಲಿ ‘ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ನೂತನ ಆದೇಶದ ಪ್ರಕಾರ ಪದ್ಮ ಪ್ರಶಸ್ತಿಗಳು ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಹಾಗೂ ರಾಷ್ಟ್ರಪತಿಗಳು ಭಾಗವಹಿಸುವ ಎಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮತ್ತು ಶಾಲಾ ಸಭೆಗಳಲ್ಲಿ ವಂದೇ ಮಾತರಂ ನುಡಿಸುವುದು ಕಡ್ಡಾಯವಾಗಿದೆ.

LEAVE A REPLY

Please enter your comment!
Please enter your name here