ವಂಡ್ಸೆ : ಫೆ.20 ರಂದು ಪ್ರತಿಷ್ಠಾ ವರ್ಧಂತಿ, ಕಲಶಾಭಿಷೇಕ ಮತ್ತು ವಾರ್ಷಿಕ ಜಾತ್ರೆ

0
97

ವಂಡ್ಸೆ : ಫೆ.20 ನೇ ಶುಕ್ರವಾರ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ಕಲಶಾಭಿಷೇಕ ಮತ್ತು ವಾರ್ಷಿಕ ಜಾತ್ರೆ ನಡೆಯಲಿದೆ.

ಬೆಳಿಗ್ಗೆ ಪಂಚವಿಂಶತಿ ಕಲಶ ಸ್ಥಾಪನೆ, ಪರಿವಾರಕ್ಕೆ ಕಲಶ, ಅಧಿವಾಸ ಹೋಮ, ಕಲಾತತ್ವ ಹೋಮ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.30ರಿಂದ ಮಹಾ ಅನ್ನಸಂತರ್ಪಣೆ , ರಾತ್ರಿ ಗಂಟೆ 8.00ಕ್ಕೆ ರಂಗಪೂಜೆ ನಡೆಯಲಿರುವುದು.

ಈ ಸಂದರ್ಭದಲ್ಲಿ ಸುಧಾಕರ ಕೊಠಾರಿಯವರಿಗೆ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ದಿ| ನಾರಾಯಣ ಗಾಣಿಗರ ಸ್ಮರಣಾರ್ಥ ಕೊಡಮಾಡುವ
“ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ” ನೀಡಿ ಗೌರವಿಸಲಾಗುವುದು.

ರಾತ್ರಿ 7-00 ರಿಂದ ಶ್ರೀ ರಾಘವೇಂದ್ರ ಭಜನಾ ಮಂಡಳಿ, ವಂಡ್ಸೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಗಂಟೆ 2-30 ರಿಂದ (ಪ್ರಸಂಗ : ಸುಧನ್ವಾರ್ಜುನ) ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here