
ಮೂಡುಬಿದಿರೆ :ಕಳೆದ ನಲುವತ್ತನಾಲ್ಕು ವರುಷಗಳಿಂದ ಪ್ರತಿಷ್ಠಿತ ವರ್ಧಮಾನ ಸಾಹಿತ್ಯ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು 2024ರ ಸಾಲಿನ ಪ್ರಶಸ್ತಿಗಳನ್ನು ನಿರ್ಣಯಿಸಿದ್ದು ಹಿರಿಯ ಸಾಹಿತಿ ಉಡುಪಿಯ ಶ್ರೀ ಪ್ರೇಮಶೇಖರ್ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಮತ್ತು ಹೊಸ ಪೀಳಿಗೆಯ ಮಹತ್ವದ ವಿಮರ್ಶಕ ಹಾವೇರಿಯ ಶ್ರೀ ವಿಕಾಸ ಹೊಸಮನಿ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದೆ.
ವರ್ಧಮಾನ ಸಾಹಿತ್ಯ ಪ್ರಶಸ್ತಿಯು ರೂಪಾÊ ಇಪ್ಪತ್ತೆÊದು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದರೆ ವರ್ಧಮಾನ ಉದಯೋನ್ಮುಖ ಪ್ರಶಸ್ತಿಯು ರೂಪಾÊ ಹದಿನೈದು ಸಾವಿರದÀ ಗೌರವ ಸಂಭಾವನೆ, ತಾಮ್ರಪತ್ರದ ಜೊತೆ ಸನ್ಮಾನವನ್ನೂ ಒಳಗೊಂಡಿವೆ.
ಮೂಡುಬಿದಿರೆಯಲ್ಲಿ ಜು. 5ರ ಶನಿವಾರ ವರ್ಧಮಾನ ಪ್ರಶಸ್ತಿ ಪೀಠದ ಮಹಾಸಭೆಯು ಪೀಠದ ಉಪಾಧ್ಯಕ್ಷರಾದ ಕೆ. ಶ್ರೀಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಈ ಸಾಲಿನ ತೀರ್ಪುಗಾರರಾದ ವಿಮರ್ಶಕ ಡಾ.ಬಿ.ಜನಾರ್ದನ ಭಟ್, ಪ್ರಾಧ್ಯಾಪಕ ಪ್ರೊ| ಬಿ.ಪಿ.ಸಂಪತ್ ಕುಮಾರ್ ಮತ್ತು ವಿಮರ್ಶಕ ಬೆಳಗೋಡು ರಮೇಶ ಭಟ್ ಅವರುಗಳುಳ್ಳ ತ್ರಿಸದಸ್ಯ ಸಮಿತಿಯು ನೀಡಿದ ಶಿಫಾರಸ್ಸಿನ ಆಧಾರದಲ್ಲಿ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ. ಮೂಡುಬಿದಿರೆಯ ಸಮಾಜಮಂದಿರ ಸಭಾ (ರಿ.) ಸಪ್ಟಂಬರ್ ತಿಂಗಳಲ್ಲಿ ನಡೆಸುವ ದಸರಾ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ.ನಾ.ಮೊಗಸಾಲೆ ಅವರು ತಿಳಿಸಿದ್ದಾರೆ.