ತುಳುನಾಡು–ನುಡಿ, ಸಂಸ್ಕೃತಿಯ ರಕ್ಷಣೆ ಹಾಗೂ ಜನಪರ ಹೋರಾಟಕ್ಕೆ ಗಣ್ಯರ ಮೆಚ್ಚುಗೆ
ವಿಶೇಷ ಚೇತನ ಮಕ್ಕಳಿಗೆ ನೆರವು, ಭಗನಿ ಸಮಾಜದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮ

ಮಂಗಳೂರು : ತುಳುನಾಡ ರಕ್ಷಣಾ ವೇದಿಕೆ (ರಿ.) ಸಂಸ್ಥಾಪಕ ಅಧ್ಯಕ್ಷ ಹಾಗೂ ಆಲ್ ಇಂಡಿಯಾ ಕನ್ಸ್ಯೂಮರ್ ಪ್ರೊಟೆಕ್ಷನ್ ಆರ್ಗನೈಸೇಷನ್ಸ್ನ ಕರ್ನಾಟಕ ರಾಜ್ಯಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ರಕ್ತದಾನ, ವಿಶೇಷ ಚೇತನ ಮಕ್ಕಳಿಗೆ ನೆರವು, ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿತಿಂಡಿ ಹಾಗೂ ಹಣ್ಣುಹಂಪಲು ವಿತರಣೆ ಮತ್ತು ಸಂಘಟನೆಯ ಉಡುಪಿ ಜಿಲ್ಲಾ ಕಚೇರಿಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆಯ ಮೂಲಕ ಜನಸೇವೆ ಹಾಗೂ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಲಾಯಿತು.
ಲೇಡಿಗೋಷನ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
ಯೋಗಿಶ್ ಶೆಟ್ಟಿ ಜಪ್ಪು ಅವರ ಹುಟ್ಟುಹಬ್ಬದ ಪ್ರಯುಕ್ತ ತುಳುನಾಡ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಅಕ್ಟೋಬರ್ 29ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಶಿವ ದುರ್ಗಾಂಭ ಮಠದ ಶ್ರೀ ದುರ್ಗಾನಂದ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗಿಶ್ ಶೆಟ್ಟಿ ಜಪ್ಪು ಅವರ ಸಾಮಾಜಿಕ ಕಳಕಳಿ, ಜನಪರ ಹೋರಾಟ ಹಾಗೂ ತುಳುನಾಡಿನ ನೆಲ, ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಅವರು ನಡೆಸುತ್ತಿರುವ ನಿರಂತರ ಪ್ರಯತ್ನಗಳನ್ನು ಶ್ಲಾಘಿಸಿದರು. ಸಮಾಜದ ಹಿತಕ್ಕಾಗಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವವರ ಪ್ರಯತ್ನಗಳು ಇತರರಿಗೂ ಪ್ರೇರಣೆಯಾಗುತ್ತವೆ ಎಂದು ಹೇಳಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಹಾಗೂ ನ್ಯಾಯವಾದಿ ರಾಘವೇಂದ್ರ ರಾವ್, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ದಿನಕರ್ ಶೆಟ್ಟಿ ಮತ್ತು ದಾಸ್ ಪ್ರಮೋಷನ್ ಸಂಸ್ಥೆಯ ಮಾಲಕ ಅನಿಲ್ ದಾಸ್ ಮಾತನಾಡಿ, ಯೋಗಿಶ್ ಶೆಟ್ಟಿ ಜಪ್ಪು ಅವರ ಮಾನವೀಯ ಕಳಕಳಿ, ಸಮಾಜಸೇವೆ ಹಾಗೂ ಜನಪರ ಹೋರಾಟಗಳನ್ನು ಪ್ರಶಂಸಿಸಿದರು.

ತುಳುನಾಡಿನ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವಿಗಾಗಿ ಅವರು ನಡೆಸುತ್ತಿರುವ ಹೋರಾಟದ ಜೊತೆಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ನಿರ್ಮಾಣಕ್ಕಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ಸ್ಮರಿಸಿ, ಅವರ ಸಾಮಾಜಿಕ ಸೇವಾ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುನಾಡ ರಕ್ಷಣಾ ವೇದಿಕೆಯ ಯುವ ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ ವಹಿಸಿದ್ದರು.
ಸ್ಪಂದನ ವಿಶೇಷ ಚೇತನ ಶಾಲೆಯ ಮಕ್ಕಳಿಗೆ ನೆರವು
ಹುಟ್ಟುಹಬ್ಬದ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಪ್ಪೂರು ಸಾಲ್ಮರದಲ್ಲಿರುವ ಸ್ಪಂದನ ವಿಶೇಷ ಚೇತನ ಶಾಲೆಗೆ 11.00 ಗಂಟೆಗೆ ಭೇಟಿ ನೀಡಿ ಮಕ್ಕಳಿಗೆ ಹಣ್ಣುಹಂಪಲು ಹಾಗೂ ದಿನಬಳಕೆಯ ಸಾಮಗ್ರಿಗಳನ್ನು ವಿತರಿಸಲಾಯಿತು.
ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂತಸ ಹಂಚಿಕೊಳ್ಳಲಾಯಿತು. ಹುಟ್ಟುಹಬ್ಬದ ಸಂಭ್ರಮವನ್ನು ವಿಶೇಷ ಚೇತನ ಮಕ್ಕಳೊಂದಿಗೆ ಹಂಚಿಕೊಳ್ಳುವ ಮೂಲಕ ಅವರ ಮೊಗದಲ್ಲಿ ನಗು ಮೂಡಿಸುವ ಪ್ರಯತ್ನ ಮಾಡಲಾಯಿತು.
ಹುಟ್ಟುಹಬ್ಬದ ಆಚರಣೆಯನ್ನು ಕೇವಲ ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜದ ಅಗತ್ಯವಿರುವ ಮಕ್ಕಳಿಗೆ ನೆರವಾಗುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿರುವುದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಭಗನಿ ಸಮಾಜದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮ
ಮಂಗಳೂರಿನ ಭಗನಿ ಸಮಾಜದಲ್ಲಿ ಸಂಜೆ ಗಂಟೆ 6 ಕ್ಕೆ ನಡೆದ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಯೋಗಿಶ್ ಶೆಟ್ಟಿ ಜಪ್ಪು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳಿಗೆ ಸಿಹಿತಿಂಡಿ ಹಾಗೂ ಹಣ್ಣುಹಂಪಲು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರ ಮಂಡಳಿ ಉಪಾಧ್ಯಕ್ಷ ಜೆ. ಇಬ್ರಾಹಿಂ ಹಾಗೂ ಕೇಂದ್ರ ಮಂಡಳಿ ಜೊತೆ ಕಾರ್ಯದರ್ಶಿ ಜ್ಯೋತಿ ಜೈನ್ ಅವರು, ಯೋಗಿಶ್ ಶೆಟ್ಟಿ ಜಪ್ಪು ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಜನರ ಹಿತಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.
ಜಪ್ಪು ರೈಲ್ವೆ ಕೆಳಸೇತುವೆ ನಿರ್ಮಾಣ, ಜಪ್ಪು ಮಾರುಕಟ್ಟೆಯ ಅಭಿವೃದ್ಧಿ ಹಾಗೂ ರಸ್ತೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಗಾಗಿ ಅವರು ನಡೆಸಿದ ಹೋರಾಟಗಳು ಜನಪರ ಕಾಳಜಿಗೆ ಸಾಕ್ಷಿಯಾಗಿವೆ. ಸಾರ್ವಜನಿಕರ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರಕ್ಕಾಗಿ ಧ್ವನಿ ಎತ್ತುವ ಅವರ ಕಾರ್ಯಗಳು ಸಮಾಜದ ಇತರರಿಗೂ ಸ್ಫೂರ್ತಿಯಾಗಿವೆ ಎಂದು ಅಭಿಪ್ರಾಯಪಟ್ಟರು.
ಮಕ್ಕಳೊಂದಿಗೆ ಸಂತಸ ಹಂಚಿಕೊಂಡು, ಅವರಿಗೆ ಸಿಹಿತಿಂಡಿ ಮತ್ತು ಹಣ್ಣುಹಂಪಲು ವಿತರಿಸುವಂತಹ ಕಾರ್ಯಕ್ರಮಗಳು ಮಾನವೀಯತೆ, ಪ್ರೀತಿ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುತ್ತವೆ ಎಂದು ಅವರು ತಿಳಿಸಿದರು.
ಉಡುಪಿ ಕಚೇರಿಯಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆ
ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಕಚೇರಿಯಲ್ಲಿ ಸಂಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರ ಹುಟ್ಟುಹಬ್ಬವನ್ನು ಉಡುಪಿ ಜಿಲ್ಲಾದ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ನೇತ್ರತ್ವದಲ್ಲಿ 11.30 ಕ್ಕೆ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ ಕಚೇರಿಯಲ್ಲಿ ಯೋಗಿಶ್ ಶೆಟ್ಟಿ ಜಪ್ಪು ಅವರನ್ನು ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಲಾಯಿತು. ಬಳಿಕ ಕೇಕ್ ಕತ್ತರಿಸಿ ಸಿಹಿತಿಂಡಿ ಹಂಚುವ ಮೂಲಕ ಕಾರ್ಯಕರ್ತರು ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಬಾಲಾಜಿ ಮಾತನಾಡಿ, ಯೋಗಿಶ್ ಶೆಟ್ಟಿ ಜಪ್ಪು ಅವರು ಬಡವರ ಪರವಾಗಿ ಹಾಗೂ ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತುಳುನಾಡಿನ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಯ ರಕ್ಷಣೆಗಾಗಿ ಅವರು ನಡೆಸುತ್ತಿರುವ ಹೋರಾಟ ಹಾಗೂ ಸಮಾಜದ ದುರ್ಬಲ ವರ್ಗಗಳ ಬಗ್ಗೆ ತೋರುತ್ತಿರುವ ಕಾಳಜಿ ಶ್ಲಾಘನೀಯವಾಗಿದೆ ಎಂದು ಹೇಳಿದರು.
ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಮಾತನಾಡಿ, ಯೋಗಿಶ್ ಶೆಟ್ಟಿ ಜಪ್ಪು ಅವರೊಂದಿಗೆ ಕೆಲಸ ಮಾಡುವುದು ಕಾರ್ಯಕರ್ತರಿಗೆ ಹೆಮ್ಮೆಯ ಸಂಗತಿಯಾಗಿದೆ. ಅವರು ಕಾರ್ಯಕರ್ತರನ್ನು ಕುಟುಂಬದ ಸದಸ್ಯರಂತೆ ಕಾಣುತ್ತಾರೆ. ಸಂಘಟನೆಯ ಬೆಳವಣಿಗೆಗಾಗಿ ತೋರುತ್ತಿರುವ ಅವರ ತ್ಯಾಗ, ಪರಿಶ್ರಮ ಮತ್ತು ಬದ್ಧತೆ ಅನುಕರಣೀಯವಾಗಿದೆ. ಸಂಘಟನೆಯ ಕೆಂಪು ಶಾಲಿಗೆ ವಿಶಿಷ್ಟ ಗೌರವ ಮತ್ತು ಗುರುತನ್ನು ತಂದುಕೊಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಅಧಿಕಾರಕ್ಕಾಗಿ ಅಲ್ಲ, ತುಳುನಾಡಿನ ಅಸ್ಮಿತೆಗಾಗಿ ಹೋರಾಟ
ಸನ್ಮಾನ ಹಾಗೂ ಅಭಿನಂದನೆಗಳಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಯೋಗಿಶ್ ಶೆಟ್ಟಿ ಜಪ್ಪು ಅವರು, ತಮ್ಮ ಹುಟ್ಟುಹಬ್ಬವನ್ನು ಪ್ರೀತಿಯಿಂದ ಆಚರಿಸಿದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು.
ಕಾರ್ಯಕರ್ತರ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ತಮ್ಮ ದೊಡ್ಡ ಆಸ್ತಿ ಎಂದು ಹೇಳಿದ ಅವರು, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪನೆಯ ಉದ್ದೇಶ ಹಾಗೂ ಸಂಘಟನೆ ಬೆಳೆದು ಬಂದ ಹಾದಿಯನ್ನು ಸ್ಮರಿಸಿದರು.
“ನಾನು ಯಾವುದೇ ಅಧಿಕಾರಕ್ಕಾಗಿ ಹೋರಾಟ ಮಾಡುತ್ತಿಲ್ಲ. ನನ್ನ ತುಳುನಾಡಿನ ಅಸ್ಮಿತೆ, ತುಳುವರ ಸ್ವಾಭಿಮಾನ, ಭಾಷೆ, ಸಂಸ್ಕೃತಿ ಮತ್ತು ಜನರ ಹಕ್ಕುಗಳ ರಕ್ಷಣೆಗಾಗಿ ಹೋರಾಟ ಮಾಡುತ್ತಿದ್ದೇನೆ. ಈ ಹೋರಾಟದಲ್ಲಿ ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲವೇ ನನ್ನ ಶಕ್ತಿ. ಮುಂದೆಯೂ ಇದೇ ಒಗ್ಗಟ್ಟು ಹಾಗೂ ಬದ್ಧತೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳೋಣ” ಎಂದು ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿದರು.
ಗಣ್ಯರು ಹಾಗೂ ಪದಾಧಿಕಾರಿಗಳ ಉಪಸ್ಥಿತಿ
ರಕ್ತದಾನ ಶಿಬಿರದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಯುವ ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ, ಜೊತೆ ಕಾರ್ಯದರ್ಶಿ ಜ್ಯೋತಿ ಜೈನ್, ಕೇಂದ್ರ ಮಂಡಳಿ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ನಗರ ಪ್ರಧಾನ ಕಾರ್ಯದರ್ಶಿ ಕ್ಲೀಟಸ್ ಲೋಬೊ, ನಗರ ಉಪಾಧ್ಯಕ್ಷ ಮುನೀರ್ ಮುಕ್ಕಚೇರಿ, ನಗರ ಸಂಘಟನಾ ಕಾರ್ಯದರ್ಶಿ ಫಾರೂಕ್ ಗೋಲ್ಡನ್, ನಗರ ಮಹಿಳಾ ಪ್ರಧಾನ ಕಾರ್ಯದರ್ಶಿ ಶಾರದಾ ಶೆಟ್ಟಿ, ಚೇತನ್, ಮೋಹನ್ ಶೆಟ್ಟಿ ಪಾವೂರು, ಜನಾರ್ದನ ಬೆಂಗ್ರೆ ಹಾಗೂ ಬೆಂಗಳೂರು ವಿಶ್ವ ತುಳುವರ ಉತ್ಸವದ ಸಂಯೋಜಕ ಅನಿಲ್ ಕುಮಾರ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಮಾಜಸೇವಕರು ಉಪಸ್ಥಿತರಿದ್ದರು.
ಇತರ ಕಾರ್ಯಕ್ರಮಗಳಲ್ಲಿ ಶಿವ ದುರ್ಗಾಂಭ ಮಠದ ಶ್ರೀ ದುರ್ಗಾನಂದ ಸ್ವಾಮೀಜಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಹಾಗೂ ನ್ಯಾಯವಾದಿ ರಾಘವೇಂದ್ರ ರಾವ್, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸ್ಥಾಪಕ ಅದ್ಯಕ್ಷ ದಿನಕರ್ ಶೆಟ್ಟಿ, ದಾಸ್ ಪ್ರಮೋಷನ್ ಸಂಸ್ಥೆಯ ಮಾಲಕ ಅನಿಲ್ ದಾಸ್, ಕೇಂದ್ರ ಮಂಡಳಿ ಉಪಾಧ್ಯಕ್ಷ ಜೆ. ಇಬ್ರಾಹಿಂ, ಕೇಂದ್ರ ಮಂಡಳಿ ಜೊತೆ ಕಾರ್ಯದರ್ಶಿ ಜ್ಯೋತಿ ಜೈನ್, ಕೇಂದ್ರ ಮಂಡಳಿ ಕೋಶಾಧಿಕಾರಿ ಪ್ರಶಾಂತ್ ಅಂಚನ್, ನಗರ ಉಪಾಧ್ಯಕ್ಷೆ ಶಾರದಾ ಶೆಟ್ಟಿ, ನಗರ ಉಪಾಧ್ಯಕ್ಷ ಮುನೀರ್ ಮುಕ್ಕಚೇರಿ, ಯುವ ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ, ನಗರ ಪ್ರಧಾನ ಕಾರ್ಯದರ್ಶಿ ಕ್ಲೀಟಸ್ ಲೋಬೊ, ನಗರ ಸಂಘಟನಾ ಕಾರ್ಯದರ್ಶಿ ಫಾರೂಕ್ ಗೋಲ್ಡನ್, ಮೋಹನ್ ಶೆಟ್ಟಿ ಪಾವೂರು, ಜನಾರ್ದನ ಬೆಂಗ್ರೆ ಹಾಗೂ ಅನಿಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ ಬಾಣಬೆಟ್ಟು, ಮನೋಜ್ ಕೆ.ಜಿ. ರೋಡ್ ಜಿಲ್ಲಾ ಉಪಾಧ್ಯಕ್ಷರು, ಅಶೋಕ್ ಬೈಲೂರು ದುಬೈ ಘಟಕ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ ಪ್ರೀತಂ ಡಿಕೋಸ್ಟ ಜಿಲ್ಲಾ ಜೊತೆ ಕಾರ್ಯದರ್ಶಿ , ಜಿಲ್ಲಾ ಕಾರ್ಮಿಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ, ಜಿಲ್ಲಾ ಮಹಿಳಾ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಮಹಿಳಾ ಉಪಾಧ್ಯಕ್ಷೆ ಗಾಯತ್ರಿ, ಮಹಿಳಾ ಪ್ರಧಾನ ಕಾರ್ಯದರ್ಶಿ ಪವಿತ್ರ, ಜಿಲ್ಲಾ ಜೊತೆ ಕಾರ್ಯದರ್ಶಿ ವನಿತಾ ಎಸ್., ಸಂಘಟನಾ ಕಾರ್ಯದರ್ಶಿ ನಿರ್ಮಲ ಮೆಂಡನ್, ಸಂಘಟನಾ ಜೊತೆ ಕಾರ್ಯದರ್ಶಿ ಮಮತಾ ಹಾಗೂ ಸಾಂಸ್ಕೃತಿಕ ಅಧ್ಯಕ್ಷೆ ಮಂಜುಳ ಉಪಸ್ಥಿತರಿದ್ದರು.
ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಬ್ರಹ್ಮಾವರ ಅಧ್ಯಕ್ಷ ಶರತ್ ರಾಜ್ ಆರೂರು, ಮಹಿಳಾ ಅಧ್ಯಕ್ಷೆ ಅನುಸೂಯಾ ಶೆಟ್ಟಿ, ಬೈರಂಪಳ್ಳಿ ಘಟಕದ ಅಧ್ಯಕ್ಷ ಕೃಷ್ಣಾನಂದ ನಾಯಕ್, ಉಪಾಧ್ಯಕ್ಷ ಗುಣಕಾರ ಹಾಲಕ್ಕಿ, ಪ್ರಧಾನ ಕಾರ್ಯದರ್ಶಿ ನಿಶಾಂತ್ ಪೂಜಾರಿ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಸುಶಾಂತ್ ಬ್ರಹ್ಮಾವರ,AFKCCI ಹಾಗೂ ಬಾಂಬೆ ಚೇಂಬರ್ ಆಫ್ ಇಂಡಸ್ಟ್ರಿ ಸತೀಶ್ ಪೂಜಾರಿ ಕೀಳಂಜೆ, ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸೆರ್ಲೆಬೆಟ್ಟು ಹಿರಿಯ ಕಾಂಗ್ರೆಸ್ ಮುಖಂಡ ಜಯಶೆಟ್ಟಿ ಬನ್ನಂಜೆ, ಉದಯ್ ಮಾಣೆಯಿ, ಜ್ಯೋತಿ, ಹರಿನಾಕ್ಷಿ, ಜಯಲಕ್ಷ್ಮಿ, ರಾಜೇಶ್ವರಿ, ಶಾಮಲಾ ಸುವರ್ಣ, ಉಷಾ ಎಸ್. ಕೋಟ್ಯಾನ್, ರಾಘವೇಂದ್ರ ಶೆಟ್ಟಿ, ರಾಜೇಶ್, ಸುಲೋಚನ ಪೂಜಾರಿ, ಗಣೇಶ್ ರಾಜ್ ಸರಳಬೆಟ್ಟು, ದಿನೇಶ್ ಆಚಾರ್ಯ, ರವಿ, ರಮೇಶ್, ಗೋಪಾಲ್ ನಾಯ್ಕ್, ವಿಜಯ್ ಆಚಾರ್ಯ, ಸಂದೀಪ್ ಕುಲಾಳು ಬೈರಂಪಳ್ಳಿ ಹಾಗೂ ಸೋಮಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಕೇಂದ್ರ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ರಕ್ತದಾನ, ವಿಶೇಷ ಚೇತನ ಮಕ್ಕಳಿಗೆ ನೆರವು, ಮಕ್ಕಳೊಂದಿಗೆ ಸಂತಸ ಹಂಚಿಕೊಳ್ಳುವುದು ಹಾಗೂ ತುಳುನಾಡಿನ ಭಾಷೆ, ಸಂಸ್ಕೃತಿ ಮತ್ತು ಜನರ ಹಕ್ಕುಗಳಿಗಾಗಿ ಹೋರಾಟ ನಡೆಸುವ ಸಂಕಲ್ಪದೊಂದಿಗೆ ಯೋಗಿಶ್ ಶೆಟ್ಟಿ ಜಪ್ಪು ಅವರ ಹುಟ್ಟುಹಬ್ಬದ ಆಚರಣೆ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

