ಮೂಡುಬಿದಿರೆಯ ಆಳ್ವಾಸ್ ಸೆಂಟ್ರಲ್ ಸ್ಕೂಲಿನ ಶಿಕ್ಷಕಿ ವೇದಶ್ರೀ ಅವರಿಗೆ ಶಿಕ್ಷಣ ಸೌರಭ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯ ಬರಹಗಾರರ ಬಳಗ ಹೂವಿನಹಡಗಲಿ ಇವರ ಆಶ್ರಯದಲ್ಲಿ ಶಿವಮೊಗ್ಗದ ಕರ್ನಾಟಕ ಸಂಘ ಸಭಾಭವನದಲ್ಲಿ ನಡೆದ ರಾಷ್ಟ್ರಮಟ್ಟದ ನುಡಿ ವೈಭವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಆಳ್ವಾಸ್ ಸೆಂಟ್ರಲ್ ಸ್ಕೂಲ್ ನಲ್ಲಿ ಸಮಾಜ ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ವೇದಶ್ರೀ ಅವರು ಸಾಹಿತ್ಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಅವರ ಸಾಹಿತ್ಯ ಸೇವೆ ನಿರಂತರವಾಗಿ ಮುಂದುವರೆಯಲಿ ಎಂದು ಕರ್ನಾಟಕ ಬರಹಗಾರರ ಬಳಗದ ರಾಜ್ಯ ಅಧ್ಯಕ್ಷರಾದ ಮಧು ನಾಯಕ್ ಲಂಬಾಣಿ ಅವರು ತಿಳಿಸಿರುತ್ತಾರೆ.