ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಮಳೆಗಾಲದ ಮುನ್ನೆಚ್ಚರಿಕೆಯ ಪೂರ್ವ ತಯಾರಿ ಕುರಿತು ವೀರಕಂಭ ಗ್ರಾಮದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯು ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ವೀರಕಂಭ ಗ್ರಾಮಪಂಚಾಯತ್ ಆಡಳಿತ ಅಧಿಕಾರಿ ದಿನೇಶ್ ರವರ ಅಧ್ಯಕ್ಷತೆಯಲ್ಲಿ ವೀರಕಂಭ ಗ್ರಾಮ ಪಂಚಾಯತಿನಲ್ಲಿ ಮೇ 27ನೇ ಬುಧವಾರ ಜರಗಿತು.
ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಲ್ಲುಕೋರೆಗಳ ಹೊಂಡಗಳು, ಕೆರೆಗಳು, ಕಾಲುಸಂಕಗಳ ಕುರಿತಾಗಿ ಮಳೆಗಾಲ ಪೂರ್ವದಲ್ಲಿ ಅನುಸರಿಸಬೇಕಾದ ಮುನ್ನಚ್ಚರಿಕೆ ಕ್ರಮಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ – ಕಸಸಂಗ್ರಹಣೆ ಸಮಸ್ಯೆ, ಸವಾಲುಗಳು, ಕಾರ್ಯವಿಧಾನಗಳ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಎರಡು ಜನ ಕ್ಷಯ ರೋಗ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ವತಿಯಿಂದ ಪೌಷ್ಟಿಕ ಆಹಾರ ಸಾಮಗ್ರಿ ಕಿಟ್ ಗಳನ್ನು ವಿತರಿಸಲಾಯಿತು.
ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಕ್ರಿಯವಲ್ಲದ ಉದ್ಯೋಗ ಚೀಟಿಗಳ ಪರಿಶೀಲನೆ ಮತ್ತು ರದ್ದುಪಡಿಸುವ ಬಗ್ಗೆ ನಿರ್ಣಯಿಸಲಾಯಿತು.
ವೀರಕಂಭ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ, ಅಂಗನವಾಡಿ ಮೇಲ್ವಿಚಾರಕಿ ರೂಪಕಲಾ ,ಗ್ರಾಮ ಅರೋಗ್ಯ ಸುರಕ್ಷಣಾಧಿಕಾರಿ ಇಲಾಖೆ ಜ್ಯೋತಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ನೇಹ ಸಂಜೀವಿನಿ ಮಹಿಳಾ ಒಕ್ಕೂಟ ದ ಪದಾಧಿಕಾರಿಗಳು, ಟಾಸ್ಕ್ ಫೋರ್ಸ್ ಸಮಿತಿ ಯ ಸದಸ್ಯರು, ಪಂಚಾಯತ್ ಕಾರ್ಯದರ್ಶಿ ಸವಿತಾ, ಲೆಕ್ಕ ಸಹಾಯಕ ನವೀನ್ ರಾಬರ್ಟ್, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಸಭೆಯ ನಂತರ ಕಲ್ಲು ಕೋರೆ ಪ್ರದೇಶಕ್ಕೆ ಹಾಗೂ ದ. ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ, ಮಜಿ – ವೀರಕಂಬ ಕ್ಕೆ ಭೇಟಿ ನೀಡಲಾಯಿತು.

