ರಾಯರ ದರ್ಶನಕ್ಕೆ ಹೊರಟವರ ವಾಹನ ಅಪಘಾತ ; ಸ್ಥಳದಲ್ಲಿಯೇ 8 ಭಕ್ತರ ದುರ್ಮರಣ, 13 ಮಂದಿಗೆ ಗಾಯ

0
68

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ರಾಯರ ದರ್ಶನಕ್ಕೆ ಬೊಲೆರೋ ವಾಹನದಲ್ಲಿ ತೆರಳುತ್ತಿದ್ದಾಗ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಮೃತರಾಗಿದ್ದಾರೆ. ಅಪಘಾತದ ತೀವ್ರತೆಗೆ ಭಕ್ತರಿದ್ದ ವಾಹನ ನಜ್ಜುಗುಜ್ಜಾಗಿದೆ.

ಚಿಕ್ಕಬಳ್ಳಾಪುರ ಮೂಲದ ಭಕ್ತರು ಬೊಲೆರೋ ವಾಹನದ ಮೂಲಕ ರಾಯರ ದರ್ಶನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಬೊಲೆರೋ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 21 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

21 ಜನರು ಪೈಕಿ ಆರು ಭಕ್ತರು ಸ್ಥಳದಲ್ಲಿ ಸಾವನ್ನಪ್ಪಿದ್ರೆ, ಇಬ್ಬರು ಎಮಿಗನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಕಾರಿಯಾಗದೇ ಉಸಿರು ಚೆಲ್ಲಿದ್ದಾರೆ. ಇನ್ನುಳಿದ 13 ಜನರಿಗೆ ಎಮಿಗನೂರು ಹಾಗೂ ಕರ್ನೂಲ್ ಸರ್ಕಾರಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕೆ ಮಂತ್ರಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೊಳಗಾದ ವಾಹನವನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿದೆ.

ಬೊಲೆರೋ ವಾಹನಕ್ಕೆ ಡಿಕ್ಕಿಯಾದ ಬಳಿಕ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್‌ ಸಹ ಪಲ್ಟಿಯಾಗಿದೆ. ಪೊಲೀಸರು ಮೃತರ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here