Monday, January 20, 2025
HomeUncategorizedವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮ.

ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮ.

ಕುಂದಾಪುರ: ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆದು ಕರಾಟೆ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮವು ದಿನಾಂಕ 15 -12- 2024ರ ಭಾನುವಾರದಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನೆರವೇರಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿಕೊಂಡರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡು ಹಲವಾರು ಪ್ರಶಸ್ತಿ ಪುರಸ್ಕಾರವನ್ನು ಮುಡಿಗೇರಿಸಿಕೊಂಡಂತಹ ಕೊಳಲುವಾದಕರಾದ ಮಾಸ್ಟರ್ ಶ್ಯಾಮ್ ಇವರಿಂದ ಕೊಳಲುವಾದನ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಪ್ರಾಂಶುಪಾಲರಾದ (ವಿಯೆಟ್ನಾಂ ಅಂತರಾಷ್ಟ್ರೀಯ ಬೆಸ್ಟ್ ಐಕಾನ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರು) ಶ್ರೀ ಗಣೇಶ ಮೊಗವೀರ ರವರು ಹಾಗೂ ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕ್ರತರು) ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಗೆಯೇ ವೇದಿಕೆಯಲ್ಲಿ ಗೌರವ ಉಪಸ್ಥಿತರಾಗಿ ಶ್ರೀ ಯೋಗೀಶ್ ಗುಡ್ರಿ, ಶ್ರೀ ನಾಗರಾಜ್ ಪುತ್ರನ್, ಶ್ರೀ ರಾಘವೇಂದ್ರ ಕುಲಾಲ್ ಹೆಮ್ಮಾಡಿ,‌ ಶ್ರೀ ಸುರೇಂದ್ರ ಶೆಟ್ಟಿ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಗಣೇಶ್ ಮೊಗವೀರ ಹಾಗೂ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರಿಗೆ ಶ್ರೀ ಅಕ್ಷಯ್ ಹೆಮ್ಮಾಡಿಯವರು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಶಿವಾನಿಯವರು ನಿರ್ವಹಿಸಿದರು.

RELATED ARTICLES
- Advertisment -
Google search engine

Most Popular