ವರದಿ ರಾಯಿ ರಾಜ ಕುಮಾರ
ಮೂಡುಬಿದಿರೆಯ ಯಕ್ಷನಿಧಿ ಸಂಸ್ಥೆಯು ದಶಮ ಸಂಭ್ರಮದಲ್ಲಿದ್ದು ನವೆಂಬರ್ 8ರಂದು ಯಕ್ಷಗಾನ ಕಲಾವಿದ ವೇಣೂರು ಅಶೋಕ ಆಚಾರ್ಯ ಅವರಿಗೆ ಪ್ರಶಸ್ತಿಯನ್ನು ನೀಡಲಿದೆ.
ಸಮಾಜ ಮಂದಿರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕರಿಂಜೆ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಉದ್ಯಮಿ ಶ್ರೀಪತಿ ಭಟ್ ವಹಿಸಲಿದ್ದು ಮಾಜಿ ಸಚಿವ ಅಭಯ ಚಂದ್ರ ಜೈನ್ ,ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ನವೆಂಬರ್ ಆರರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಯಕ್ಷನಿಧಿಯ ಸ್ಥಾಪಕ ಅಧ್ಯಕ್ಷ ಶಿವಕುಮಾರ್ ತಿಳಿಸಿದರು.
ನವೆಂಬರ್ 8ರಂದು ಬೆಳಗ್ಗೆ ಏಳು ಗಂಟೆಯಿಂದ ರಾತ್ರಿ 10.30 ತನಕ ವಿವಿಧ ಯಕ್ಷಗಾನ ಕಾರ್ಯಕ್ರಮಗಳು ನಡೆಯಲಿದೆ ಎಂದು ಅಧ್ಯಕ್ಷೆ ಲತಾ ಸುರೇಶ್, ಉಪಾಧ್ಯಕ್ಷ ಹರಿಶ್ಚಂದ್ರ ಕುಲಾಲ್, ಕಾರ್ಯದರ್ಶಿ ಪ್ರತೀಕ್, ಕಾರ್ಯಾಧ್ಯಕ್ಷ ಆದರ್ಶ್, ಮೇಳದ ಅರ್ಚಕ ಪ್ರದ್ಯುಮ್ನ ಭಟ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದು ತಿಳಿಸಿರುತ್ತಾರೆ.

