ವೇಣೂರು: ಜಿಲ್ಲಾ ಸಂಚಾರಿ ನೇತ್ರ ಘಟಕ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ವತಿಯಿಂದ ಸೆ. 19ರಂದು ಬೆಳಿಗ್ಗೆ 10.30 ರಿಂದ 1.00ರ ವರಗೆ ನಾಗರಿಕರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರವು ವೇಣೂರು ಪ್ರಾಥಮಿಕ ಅರೋಗ್ಯ ಕೇಂದ್ರ ಇಲ್ಲಿ ನಡೆಯಲಿದೆ.
ಶಿಬಿರದಲ್ಲಿ ಲಭ್ಯವಿರುವ ಕನ್ನಡಕಗಳನ್ನು ವಿತರಿಸಲಾಗುವುದು. ಕಣ್ಣಿನ ಪೊರೆ ಇರುವವರಿಗೆ ಶಸ್ತ್ರಚಿಕಿತ್ಸೆ (ಆಪರೇಷನ್ ) ಯ ವ್ಯವಸ್ಥೆ ಮಾಡಲಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವವರು ಆಧಾರ್ ಮತ್ತು ರೇಷನ್ ಕಾರ್ಡ್ ಹಾಗೂ ಮೊಬೈಲ್ ತರುವಂತೆ ಆರೋಗ್ಯ ಕೇಂದ್ರದ ಪ್ರಕಟಣೆ ತಿಳಿಸಿದೆ.

