ವೇಣೂರು: ಯುವವಾಹಿನಿ (ರಿ.) ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು ಆರಂಬೋಡಿ ಇವರು ಆಯ್ಕೆಯಾಗಿದ್ದಾರೆ.
ಪ್ರಸ್ತುತ ಇವರು ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಸದಸ್ಯರಾಗಿ, ಹಿಂದೂ ಜಾಗರಣ ವೇದಿಕೆ ಆರಂಬೋಡಿ ಮೊಸರು ಕುಡಿಕೆ ಉತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಮಂಜುನಾಥೇಶ್ವರ ಭಜನಾ ಮಂಡಳಿ ಪಾಣಿಮೇರು ಇದರ ಸದಸ್ಯರಾಗಿ, ಬಿರುವೆರ್ ಕೂಟ ಆರಂಬೋಡಿ ಗ್ರಾಮದ ಸದಸ್ಯರಾಗಿ, ಹೊಕ್ಕಾಡಿಗೋಳಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾಗಿ, ಕೃಷಿಕರಾಗಿದ್ದು, ಅಲ್ಲದೆ ವಿವಿಧ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಇವರು ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.