Saturday, June 14, 2025
Homeರಾಜ್ಯವಿಧಾನ ಪರಿಷತ್ ನ ಖಾಲಿ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ವಿಧಾನ ಪರಿಷತ್ ನ ಖಾಲಿ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.

ಆರು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಜೂ. 3ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ.  

RELATED ARTICLES
- Advertisment -
Google search engine

Most Popular