ಶಾಂತಿನಿಕೇತನ ಪಬ್ಲಿಕ್ ಸ್ಕೂಲ್, ಬೆಳಗಾವಿ ಇಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ೧೯ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಪೃಥ್ವೀಶ್ ಬಿ ರೈ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
Home Uncategorized ವಿದ್ಯಾಭಾರತಿ ಪ್ರಾಂತಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

