ಶ್ರೀದೇವಿ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ.
ಈ ಪಂದ್ಯಾಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ಕೆ.ಎಂ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅಂತೆಯೇ ಪ್ರಥಮ ಪಿಯುಸಿಯ ಕಲಾವಿಭಾಗದ ಪ್ರೀತೇಶ್, ವಾಣಿಜ್ಯ ವಿಭಾಗದ ಅಭಯ್ ಎಸ್. ರಾವ್ , ದ್ವಿತೀಯ ವಿಜ್ಞಾನ ವಿಭಾಗದ ಯಜ್ಞ ಇವರು ಬೆಳ್ಳಿ ಪದಕ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಅಕ್ಷಯ್ ಬಿ .ಟಿ ಹಾಗೂ ಸಾನ್ವಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ತAಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆೆ.
Home Uncategorized ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ

