ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಭಾಗವಹಿಸಿತು . ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರೆ ಬಾಲಕರ ತಂಡ ಪ್ರ ಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಯರಾದ ಹರ್ಷಿತಾ , ಆಹನಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಹಶ್ರೀ ಭಾಗವಹಿಸಿದ್ದರು . ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನ್ವಿತ್ರೈ, ಅಕ್ಷಯ್ ನಾಯಕ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯಶಸ್.ಎಚ್. ರಜನಿ, ಯಶಸ್ವಿನ್. ಡಿ ಭಾಗವಹಿಸಿದ್ದರು . ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ . ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದವರು ಅಭಿನಂದಿಸಿದ್ದಾರೆ.