ಭಿನ್ನ ವಿಭಿನ್ನ ರೀಲ್ಸ್ಗಳನ್ನು ಮಾಡಿ ಸಖತ್ ಸುದ್ದಿಯಲ್ಲಿ ಇರುತ್ತಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ವೊಂದನ್ನು ಶೇರ್ ಮಾಡಿಕೊಂಡಿದ್ದರು. ಇದೇ ರೀಲ್ಸ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಕ್ಕಿಪೀಡಿಯಾ ವಿಕಾಸ್ ಡ್ರಗ್ಸ್ (ಮಾದಕ ವಸ್ತು ವ್ಯಸನ) ವಿಚಾರಕ್ಕೆ ಸಂಬಂಧಿಸಿದಂತ ರೀಲ್ಸ್ವೊಂದನ್ನು ಶೇರ್ ಮಾಡಿಕೊಂಡಿದ್ದರು.
ಇದೇ ವಿಚಾರಕ್ಕೆ ವಿಕ್ಕಿಪೀಡಿಯಾ ವಿಕಾಸ್ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ.