ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್‌ವೊಂದರ ಮೇಲೆ ಎಫ್‌ಐಆರ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಕಸ್ತೂರ್ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಟಾನಿಕ್ ಬಿಲ್ಡಿಂಗ್‌ನ ಕೊನೆಯ ಮಹಡಿಯಲ್ಲಿರುವ ಈ ಪಬ್ ಅವಧಿ ಮೀರಿ ತೆರೆದಿದ್ದಕ್ಕೆ ಎಫ್‌ಐಆರ್ ದಾಖಲಾಗಿದೆ.
ಜು.6ರಂದು ರಾತ್ರಿ 1.20ರ ವರೆಗೆ ಪಬ್ ತೆರೆದಿದ್ದರಿಂದ, ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ ಗಸ್ತಿನ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.