ಮೂಡುಬಿದಿರೆಯ ಅಲಂಗಾರು ಗುರುಮಠದಲ್ಲಿ ನಡೆಸಲು ಉದ್ದೇಶಿಸಿರುವ ಸಮಗ್ರ ಜೀರ್ಣೋದ್ಧಾರ ಕಾರ್ಯಗಳ ಪೂರ್ವಭಾವಿಯಾಗಿ ವಿಶ್ವಕರ್ಮ ಯಜ್ಞ ಮತ್ತು ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅ.5, ರವಿವಾರ ಬೆಳಗ್ಗೆ 10 ಗಂಟೆಗೆ ಪಡುಕುತ್ಯಾರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಮತ್ತು ಅರೆಮಾದನಹಳ್ಳಿ ಶಿವಸುಜ್ಞಾನಮೂರ್ತಿ ಸ್ವಾಮೀಜಿ ಇವರ ಉಪಸ್ಥಿತಿಯಲ್ಲಿ ಜರಗಲಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್. ಕೇಶವ ತಂತ್ರಿವರ್ಯರ ಅಧ್ಯಕ್ಷತೆಯಲ್ಲಿ ಸಮಿತಿ ಗೌರವಾಧ್ಯಕ್ಷ ಧನಂಜಯ ಪಾಲ್ಕೆ, ಮಠದ ವ್ಯವಸ್ಥಾಪಕ ಬಿ. ವಿಶ್ವನಾಥ ಪುರೋಹಿತರು, ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಕೆ. ಬಾಲಕೃಷ್ಣ ಆಚಾರ್ಯ ಉಳಿಯ ಇವರ ಉಪಸ್ಥಿತಿಯಲ್ಲಿ ಪೂ.ಗಂ. 11ಕ್ಕೆ ಧಾರ್ಮಿಕ ಸಭೆ ನಡೆಯಲಿದೆ.
ಅವಿಭಜಿತ ದ.ಕ.ದ ವಿವಿಧ ಕಾಳಿಕಾಂಬಾ ದೇವಳಗಳ ಮೊಕ್ತೇಸರರು, ವಿವಿಧ ಸಮಿತಿಗಳು, ಸಂಘಟನೆಗಳ ಅಧ್ಯಕ್ಷರು, ಉದ್ಯಮಿಗಳು, ದಾನಿಗಳ ಸಹಿತ ಗಣ್ಯರು ಪಾಲ್ಗೊಳ್ಳಿದ್ದಾರೆ.
ಮಧ್ಯಾಹ್ನ ಗಂ. 2 ಹೆಸರಾಂತ ಕಲಾವಿದರಿಂದ ತಾಳಮದ್ದಳೆ ಏರ್ಪಡಿಸಲಾಗಿದೆ.