ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷರಾಗಿ ವಿಶ್ವನಾಥ್ ಹೆಗ್ಡೆ ಅವಿರೋಧ ಆಯ್ಕೆ

0
14

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬನ್ನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ 2026–27ನೇ ಸಾಲಿನ ಆಡಳಿತ ಸಮಿತಿಗೆ ನೂತನ ಅಧ್ಯಕ್ಷರಾಗಿ ಬನ್ನಾಡಿ ಕಂಬಳಗದ್ದೆ ಮನೆಯ ಶ್ರೀ ವಿಶ್ವನಾಥ್ ಹೆಗ್ಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೆ.27ರಂದು ಬನ್ನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ವಿಶ್ವನಾಥ್ ಹೆಗ್ಡೆ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ವಿಶ್ವನಾಥ್ ಹೆಗ್ಡೆ ಅವರು ಈ ಹಿಂದೆ ಹಲವು ವರ್ಷಗಳ ಕಾಲ ಬ್ರಹ್ಮಬೈದರ್ಕಳ ಗರಡಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ನಿಸ್ವಾರ್ಥ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಗಮನ ಸೆಳೆದಿದ್ದಾರೆ. ಪ್ರಸ್ತುತ ಅವರು ಬನ್ನಾಡಿ ಬ್ರಹ್ಮಬೈದರ್ಕಳ ಸಾಂಪ್ರದಾಯಿಕ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅವರು, ಇದೀಗ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಗರಡಿಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಚಟುವಟಿಕೆಗಳನ್ನು ಮುನ್ನಡೆಸುವ ಜವಾಬ್ದಾರಿ ಮತ್ತೊಮ್ಮೆ ಅವರ ಹೆಗಲೇರಿದೆ.