Saturday, December 14, 2024
HomeUncategorizedಎಕ್ಸಲೆಂಟ್‌ನ ಯುವರಾಜ್ ಜೈನ್ ಅವರಿಗೆ ವಿಶ್ವಶಾಂತಿ ವಿದ್ಯಾ ಸೇವಾರತ್ನ ಪುರಸ್ಕಾರ

ಎಕ್ಸಲೆಂಟ್‌ನ ಯುವರಾಜ್ ಜೈನ್ ಅವರಿಗೆ ವಿಶ್ವಶಾಂತಿ ವಿದ್ಯಾ ಸೇವಾರತ್ನ ಪುರಸ್ಕಾರ

ಮೂಡುಬಿದಿರೆ: ವಿಶ್ವಶಾಂತಿ ಯುವ ಸೇವಾ ಸಮಿತಿ(ರಿ) ಬೆಂಗಳೂರು ಆಯೋಜನೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶ್ರೀ ಆದಿನಾಥ ವೈಭವ ಜಿನಸಹಸ್ರನಾಮ ಸ್ತುತಿ ಗಾಯನ ವಿಶ್ವದಾಖಲೆ ಕರ‍್ಯಕ್ರಮದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಯುವರಾಜ್ ಜೈನ್‌ಅವರಿಗೆ ವಿಶ್ವಶಾಂತಿ ವಿದ್ಯಾ ಸೇವಾರತ್ನ ಪುರಸ್ಕಾರದೊಂದಿಗೆ ಗೌರವಿಸಲಾಯಿತು.
ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಅಭೂತ ಪೂರ್ವ ಕ್ರಾಂತಿಕಾರಕ ಸಾಧನೆ. ಸಾಮಾಜಿಕ ಕ್ಷೇತ್ರಗಳಲ್ಲಿ ಸೇವಾ ತತ್ವರತೆ ,ಜೈನಧರ್ಮದ ಸಂಘಟನೆಯಲ್ಲಿನ ಬದ್ಧತೆ, ನಾಡುನುಡಿಗೆ ಅನನ್ಯ ಕೊಡುಗೆಯನ್ನು ಗುರುತಿಸಿ ಈ ಪುರಸ್ಕಾರ ಮಾಡಲಾಯಿತು.
ವೇದಿಕೆಯಲ್ಲಿ ಮೂಡುಬಿದ್ರೆ ಜೈನ ಮಠದ ಪರಮಪೂಜ್ಯ ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಭಟ್ಟಾರಕ ಡಾ.ಚಾರುಕೀರ್ತಿ ಪಂಡಿತಾಚರ‍್ಯರ‍್ಯ ಮಹಾಸ್ವಾಮೀಜಿ, ಡಿ ಹರ್ಷೆಂದ್ರ ಹೆಗ್ಡೆ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಎಕ್ಸಲೆಂಟ್ ಸಂಸ್ಥೆಯ ಕರ‍್ಯದರ್ಶಿ ರಶ್ಮಿತಾ ಜೈನ್, ಧವಳಾ ಕಾಲೇಜು ಉಪನ್ಯಾಸಕರಾದ ಅಜಿತ್ ಪ್ರಸಾದ್, ವೀಣಾ ಬಿ.ಆರ್ ಶೆಟ್ಟಿ, ವಿಶ್ವಶಾಂತಿ ಯುವ ಸೇನಾ ಸಮಿತಿಯ ನವೀನ್ ಪ್ರಸಾದ್ ಜಾಂಬಳೆ ಮತ್ತಿತರು ಉಪಸ್ಥಿತರಿದ್ದರು. ಸೇವಾ ಸಮಿತಿಯ ಧೀರಜ್ ಹೊಳೆನರಸೀಪುರ ಕರ‍್ಯಕ್ರಮ ನಿರ್ವಹಿಸಿದರು.

RELATED ARTICLES
- Advertisment -
Google search engine

Most Popular