Sunday, July 21, 2024
Homeಮಂಗಳೂರುಭಾರತೀಯ ಜನತಾ ಪಾರ್ಟಿ ವತಿಯಿಂದ ವಿವಿದೆಡೆ ಯೋಗ ದಿನಾಚರಣೆ ಆಚರಣೆ

ಭಾರತೀಯ ಜನತಾ ಪಾರ್ಟಿ ವತಿಯಿಂದ ವಿವಿದೆಡೆ ಯೋಗ ದಿನಾಚರಣೆ ಆಚರಣೆ

ಕುಂದಾಪುರ ಮಂಡಲ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಕುಂದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಶಿಕ್ಷಕ ವಿವೇಕ್ ಪೈ ಅವರು ಯೋಗಾಭ್ಯಾಸ ತರಗತಿಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ವ್ಯಾಪಾರ ವಾಣಿಜ್ಯ ಪ್ರಕೋಷ್ಟಗಳ ರಾಜ್ಯ ಸಮಿತಿ ಸದಸ್ಯ ವಿವೇಕ್ ಪೈ, ಕುಂದಾಪುರ ಪುರಸಭಾ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಕಾರ್ಕಳ ಮಂಡಲ

ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಕಾರ್ಕಳದ ಆನೆಕೆರೆ ಬಸದಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಕಾರ್ಕಳ ಮಂಡಲಾಧ್ಯಕ್ಷ ನವೀನ್ ನಾಯ್ಕ್ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಯೋಗಾಭ್ಯಾಸ ತರಗತಿಯನ್ನು ನಡೆಸಿಕೊಟ್ಟ ಯೋಗ ಶಿಕ್ಷಕ ಅಶೋಕ್ ಅವರನ್ನು ಕಾರ್ಕಳ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಉದಯ್ ಎಸ್. ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ಮಂಡಲ ವಕ್ತಾರ ರವೀಂದ್ರ ಮೊಯಿಲಿ, ಮಂಡಲ ಯೋಗ ದಿನ ಸಂಚಾಲಕ ಪ್ರವೀಣ್ ಸಾಲ್ಯಾನ್, ಒಬಿಸಿ ಮೋರ್ಚಾ ಅಧ್ಯಕ್ಷ ಪ್ರಸಾದ್ ಐಸಿರ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಪ್ರಕಾಶ್ ಬಲಿಪ, ಬಿಜೆಪಿ ಕಾರ್ಕಳ ನಗರಾಧ್ಯಕ್ಷ ನಿರಂಜನ್ ಜೈನ್, ಬಜೆಗೋಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಹಿರ್ಗಾನ, ಪ್ರಮುಖರಾದ ರವೀಂದ್ರ ಮಡಿವಾಳ, ಅನಂತ ಕೃಷ್ಣ ಶೆಣೈ, ಪುರಸಭಾ ಸದಸ್ಯ ಪ್ರಕಾಶ್ ರಾವ್ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಬೈಂದೂರು ಮಂಡಲ

ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಕೊಲ್ಲೂರು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಅಂತರ್ವನ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಯೋಗ ಶಿಕ್ಷಕ ಶ್ರೀಧರ ಆಚಾರ್ಯ ಅವರು ಯೋಗಾಭ್ಯಾಸ ತರಗತಿಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕಲ್ಗದ್ದೆ, ಮಹೇಂದ್ರ ಪೂಜಾರಿ, ಮಂಡಲ ಯೋಗ ದಿನ ಸಂಚಾಲಕ ರಮೇಶ್ ಪೂಜಾರಿ, ಕೊಲ್ಲೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಭದ್ರ ಶೆಟ್ಟಿ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಕಾಪು ಮಂಡಲ

ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶ್ರೀ ವೀರಭದ್ರ ಸಭಾ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಯೋಗ ಶಿಕ್ಷಕಿ ಸುಮಿತ್ರಾ ಅವರು ಯೋಗ ಅಭ್ಯಾಸ ತರಗತಿಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್, ಪ್ರಮುಖರಾದ ರಾಜೇಶ್ ಕುಂದರ್, ಶಶಿಪ್ರಭಾ, ಕೇಸರಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular