ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಜತೆಗೆ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಯಿತು.
ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಶೆಟ್ಟಿಗಾರ್ ಕಾಲೇಜಿನಲ್ಲಿ ಲಭ್ಯವಿರುವ ಸಿ.ಎ ಪ್ರವೇಶ ಪರೀಕ್ಷೆಗಳ ತರಬೇತಿ,ಐ.ಎ.ಸ್,ಐ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆ ‘ಯಶಸ್ʼಹಾಗೂವಾಣಿಜ್ಯವಿಭಾಗದವಿದ್ಯಾರ್ಥಿಗಳಿಗಾಗಿ ನಡೆಸಲಾಗುವಷೇರುಮಾರುಕಟ್ಟೆಹಾಗೂ ಟ್ಯಾಲಿಸರ್ಟಿಫಿಕೇಟ್ ಕೋರ್ಸ್ ಗೂ ವಿದ್ಯಾರ್ಥಿಗಳಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪೋಷಕರಿಗೆ ತಲುಪಿಸುವ ಉದ್ದೇಶಕ್ಕಾಗಿ ಬಳಸಲಾಗುವ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೇವಿಪ್ರಸಾದ್ ಹಾಗೂ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ಉಪಸ್ಥಿತರಿದ್ದರು.ಕಲಾ ವಿಬಾಗದ ಮುಖ್ಯಸ್ಥರಾದ ಯಶವಂತಿ ಡಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ಎ ಎಮ್ ನಿರೂಪಿಸಿ, ವಂದಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿದರು.

