ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ಪರದೇಪ್ತಿ -2024’

0
50

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದಿನಾಂಕ 05-07-2024 ರ
ಶುಕ್ರವಾರದಂದು 9:00 ಗಂಟೆಗೆ ʼವಿವೇಕ ಪ್ರದೀಪ್ತಿ-2024ʼ ಶೀರ್ಷಿಕೆಯಡಿ 2023-24 ನೇ ಶೈಕ್ಷಣಿಕ
ಸಾಲಿನ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ
ಅಧ್ಯಕ್ಷರಾದ ರವೀಂದ್ರ ಪಿ. ವಹಿಸಿಕೊಳ್ಳಲಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ
ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಸುಮಾರು 493 ವಿದ್ಯಾರ್ಥಿಗಳ ಹಾಗೂ ಜೆ.ಇ.ಇ,
ನೀಟ್‌, ಸಿ.ಇ.ಟಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ
ನಡೆಯಲಿದ್ದು, ವಿಶೇಷ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ
ಡಾ.ಕೆ.ಎಂ ಕೃಷ್ಣ ಭಟ್‌ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ
ಕೋಶಾಧಿಕಾರಿಗಳಾದ ಮುರಳೀಧರ ಭಟ್‌ ಬಿ. ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವೇಕಾನಂದ
ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ವತ್ಸಲಾರಾಜ್ಞಿ ಹಾಗೂ ಡಾ.ಕೆ.ಎನ್‌
ಸುಬ್ರಹ್ಮಣ್ಯ, ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ
ಎಂ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here