ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿಭಾಗದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಹಾಸನದಲ್ಲಿ ನಡೆಯಿತು. ದಕ್ಷಿಣಕನ್ನಡ ಜಿಲ್ಲಾತಂಡವನ್ನುಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹೇಮಂತ್ ಆರ್. ಗೌಡ ಇವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಯು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ – ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

