Saturday, June 14, 2025
Homeಪುತ್ತೂರುವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಕಲ್ಪ – 2024 : ಪೋಷಕರ ಸಮಾವೇಶ ಹಾಗೂ ಕಾಲೇಜು...

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಕಲ್ಪ – 2024 : ಪೋಷಕರ ಸಮಾವೇಶ ಹಾಗೂ ಕಾಲೇಜು ಪ್ರಾರಂಭೋತ್ಸವ


2024-25 ನೇ ಸಾಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ
ಕಲಾ ವಿಭಾಗಗಳ ವಿದ್ಯಾರ್ಥಿ – ಪೋಷಕರ ಸಮಾವೇಶ ʼವಿವೇಕ ಸಂಕಲ್ಪ – 2024ʼ ಎಂಬ ಶೀರ್ಷಿಕೆಯೊಂದಿಗೆ ಮೇ 30 ರಂದು ಬೆಳಗ್ಗೆ 9 ಕ್ಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ. ಪಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ಮನೋವೈದ್ಯರು ಹಾಗೂ ಲೇಖಕರಾದ ಡಾ. ವಿರೂಪಾಕ್ಷ ದೇವರಮನೆ ಅವರು ಭಾಗವಹಿಸಿ ಪೋಷಕರಿಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋಪಾಲಕೃಷ್ಣ ಭಟ್‌ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ಪೋಷಕರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ದಿನ ವಿದ್ಯಾರ್ಥಿಗಳಿಗೆ ‌ ಶೈಕ್ಷಣಿಕ ಮಾಹಿತಿ ಕಾರ್ಯಗಾರ ನಡೆಯಲಿದ್ದು, ಮೇ 31 ರಿಂದ ತರಗತಿಗಳು ಪ್ರಾರಂಭವಾಗಲಿದೆ.

RELATED ARTICLES
- Advertisment -
Google search engine

Most Popular