ಬಂದಾರು : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ -ಬೆಳ್ತಂಗಡಿ ತಾಲೂಕು,ದ.ಕ. ವಿವೇಕಾನಂದ ವಿದ್ಯಾವರ್ಧಕ ಸಂಘ ರಿ. ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 10,11 ರಂದು ಮುಂಡಾಜೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಬಂದಾರು ಶಾಲೆಯ ಕ್ರೀಡಾಪಟುಗಳಾದ ಕು. ರಕ್ಷಿತಾ, ಕು. ಅತಿಶ್ರೀ, ಕು. ಸಿಂಚನ, ಕು. ಧನ್ಯಶ್ರೀ ಇವರುಗಳು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
