ಉಜಿರೆ: ಬಿಜಾಪುರದ ತಾಳಿಕೋಟೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆಯ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತುದಾರರಾಗಿ ಗುಣಪಾಲ, ಎಂ. ಎಸ್. ಹಾಗೂ ಸಂದೀಪ್ ಶೆಟ್ಟಿ ಮತ್ತು ವ್ಯವಸ್ಥಾಪಕರಾಗಿ ನಮಿತಾ ಕೆ.ಆರ್. ಸಹಕರಿಸಿದ್ದಾರೆ.