ಉಡುಪಿ: ಮತಗಳ್ಳತನ ನಡೆಸಿ ಬಿಜೆಪಿ ದೇಶದ ಜನತೆಯನ್ನು ವಂಚಿಸುತ್ತಿದೆ. ವೋಟ್ ಚೋರ್ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ. ಹೀಗಾಗಿ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್ ಹೇಳಿದರು.
ಕಾಂಗ್ರೆಸ್ ನೇತೃತ್ವದಲ್ಲಿ ಹಳೆ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಮುಂಭಾಗ ಸೋಮವಾರ ಹಮ್ಮಿಕೊಂಡಿದ್ದ ವೋಟ್ ಚೋರ್- ಗಡ್ಡಿ ಚೋರ್ ಸಹಿ ಅಭಿಯಾನದಲ್ಲಿ ಮಾತನಾಡಿದರು.
ಕೆಪಿಸಿಸಿ ಮುಖಂಡೆ ವೆರೆನಿಕಾ ಕರ್ನೇಲಿಯೋ ಮಾತನಾಡಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಫಾ. ವಿಲಿಯಂ ಮಾರ್ಟಿಸ್, ಸತೀಶ್ ಕೊಡವೂರು, ಸತೀಶ್ ಕುಮಾರ್ ಮಂಚಿ, ಡಾ. ಸುನೀತಾ ಶೆಟ್ಟಿ, ಬಿ. ಕುಶಲ ಶೆಟ್ಟಿ, ಕೃಫ್ಣಿ ಶೆಟ್ಟಿ ಬಜಗೋಳಿ, ಪ್ರಖ್ಯಾತ್ ಶೆಟ್ಟಿ, ಸೌರಬ್ ಬಲ್ಲಾಳ್ ಉಪಸ್ಥಿತರಿದ್ದರು.

