Saturday, November 2, 2024
Homeರಾಷ್ಟ್ರೀಯಮತ ಎಣಿಕೆ | ಹರ್ಯಾಣದಲ್ಲಿ ತೀವ್ರ ಪೈಪೋಟಿ; ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌+ಎನ್‌ಸಿ ಮುನ್ನಡೆ

ಮತ ಎಣಿಕೆ | ಹರ್ಯಾಣದಲ್ಲಿ ತೀವ್ರ ಪೈಪೋಟಿ; ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌+ಎನ್‌ಸಿ ಮುನ್ನಡೆ

ನವದೆಹಲಿ: ಹರ್ಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ ನಡೆದ ಚುನಾವಣೆಗಳ ಮತ ಎಣಿಕೆ ಇಂದು ನಡೆಯುತ್ತಿದೆ. ಹರ್ಯಾಣದಲ್ಲಿ 90 ಸ್ಥಾನಗಳ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಹಣಾಹಣಿ ನಡೆದಿದೆ. ಈವರೆಗಿನ ಲೆಕ್ಕಾಚಾರದ ಪ್ರಕಾರ, ಕಾಂಗ್ರೆಸ್‌ ಪಕ್ಷ 40 ಮತ್ತು ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 90 ವಿಧಾನಸಭಾ ಕ್ಷೇತ್ರಗಳಲ್ಲಿ ಬರೋಬ್ಬರಿ 1031 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಇದರಲ್ಲಿ 464 ಮಂದಿ ಸ್ವತಂತ್ರ ಅಭ್ಯರ್ಥಿಗಳಾಗಿದ್ದು, 101 ಮಂದಿ ಮಹಿಳೆಯರು, ಅ.5ರಂದು ಒಂದೇ ಹಂತದಲ್ಲಿ ಹರ್ಯಾಣದಲ್ಲಿ ಮತದಾನ ನಡೆದಿತ್ತು.
ದಶಕಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಈವರೆಗಿನ ಲೆಕ್ಕಾಚಾರದಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ನ್ಯಾಶನಲ್‌ ಕಾನ್ಫರೆನ್ಸ್ ಮೈತ್ರಿಕೂಟ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅಧಿಕಾರದ ಗದ್ದುಗೆ ಏರುವ ಸ್ಥಿತಿಯಲ್ಲಿದೆ. ಬಿಜೆಪಿ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಪಿಡಿಪಿ ಕೇವಲ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ತೀವ್ರ ಮುಖಭಂಗಕ್ಕೊಳಗಾಗಿದೆ.

RELATED ARTICLES
- Advertisment -
Google search engine

Most Popular