ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆಯಾದ ಯಕ್ಷರಂಗ ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ಮೇ.1 ರಂದು ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಅಪರಾಹ್ನ 3 ಗಂಟೆಗೆ ಮಹಿಳೆಯರು ಯಕ್ಷಗಾನ ವೇಷಭೂಷಣದೊಂದಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಕಿರು ಯಕ್ಷಗಾನ ಪ್ರದರ್ಶನ ಮಾಡಲಿದ್ದಾರೆ ಎಂದು ಯಕ್ಷರಂಗದ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿ ತಿಳಿಸಿದ್ದಾರೆ. ಯಕ್ಷಗನ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಜಾಗೃತಿ ಯಕ್ಷಗಾನ ಪ್ರದರ್ಶನ ಯಶಸ್ವಿಗೊಳಿಸಲು ಯಕ್ಷರಂಗ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.