ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಬಳಿ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಿರ್ಮಾಣಗೊಂಡ ‘ಸಮೃದ್ಧಿ ಸಹಕಾರ ಸೌಧ’ ಸುಸಜ್ಜಿತ ಕಟ್ಟಡ ಜ.18ರಂದು (ಶನಿವಾರ) ಬೆಳಿಗ್ಗೆ ಗಂಟೆ 10.30ಕ್ಕೆ ಲೋಕಾರ್ಪಣೆಗೊಳ್ಳಲಿದೆ. ರೂ. 4.75 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಕಟ್ಟಡದಲ್ಲಿ 500 ಮತ್ತು ಒಂದು ಸಾವಿರ ಆಸನ ಸೌಲಭ್ಯ ಹೊಂದಿರುವ ಪ್ರತ್ಯೇಕ ಎರಡು ಸಭಾಂಗಣ ಸೇರಿದಂತೆ 16 ವಾಣಿಜ್ಯ ಮಳಿಗೆ ನಿಮರ್ಾಣಗೊಂಡಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ರಾಜೇಶ ನಾಯ್ಕ್ ಉಳಿಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಗಣ್ಯರು ಭಾಗವಹಿಸುವರು. ಇದೇ ವೇಳೆ ಸಂಘದ ಅಧ್ಯಕ್ಷ ಕೆ.ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಇವರ ಅಧ್ಯಕ್ಷತೆಯಲ್ಲಿ ಮಾಜಿ ಅಧ್ಯಕ್ಷ ಪಿ.ಜಿನರಾಜ ಅರಿಗ, ಹಾಲಿ ಉಪಾಧ್ಯಕ್ಷ ಅಮ್ಮು ರೈ ಹಕರ್ಾಡಿ, ಮಾಜಿ ನಿರ್ದೇಶಕ ಪೋಂಕ್ರ ಇವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಸಿಇಒ ಪಿ.ಶಿವಾನಂದ ಗಟ್ಟಿ ತಿಳಿಸಿದ್ದಾರೆ