ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಂಧನ ಯಾವ ಕ್ಷಣದಲ್ಲಾದರೂ ಆಗಲಿ ಎಂದು ವರದಿಗಳು ತಿಳಿಸಿವೆ. ಸಿಟಿ ಸಿವಿಲ್ ಕೋರ್ಟ್ ಒಂದನೇ ತ್ವರಿತಗತಿ ನ್ಯಾಯಾಯದಲ್ಲಿ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ. ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಅಧಿಕಾರಿಗಳು ವಾರೆಂಟ್ ಕೋರಿ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರಿನ ಮಹಿಳೆಯೊಬ್ಬರು ತಮ್ಮ ಪುತ್ರಿಗೆ ಯಡಿಯೂರಪ್ಪನವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಾ. 14ರಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಆ ಮಹಿಳೆ ಮೇ 26ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈಗ ಸಂತ್ರಸ್ತೆಯ ಸಹೋದರ ಕಾನೂನು ಹೋರಾಟ ನಡೆಸುತ್ತಿದ್ದಾರೆ.
ತನಿಖೆಯಲ್ಲಿ ಯಾವುದೇ ಪ್ರಗತಿಯಾಗುತ್ತಿಲ್ಲ ಎಂದು ಹೈಕೋರ್ಟ್ ಹಿರಿಯ ವಕೀಲ ಬಾಲನ್ ಮೂಲಕ ಸಂತ್ರಸ್ತೆಯ ಅಣ್ಣ ರಿಟ್ ಅರ್ಜಿ ಸಲ್ಲಿಸಿದ್ದರು. ತಿಂಗಳೊಳಗೆ ವರದಿ ಸಲ್ಲಿಸಲು ಪೊಲೀಸ್ ಆಯುಕ್ತರು ಹಾಗೂ ಸಿಐಡಿ ಇನ್ಸ್‌ಪೆಕ್ಟರ್‌ಗೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.