ಸುಳ್ಯ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯ ಅ.ಕ್ರ. 252/2014ರ ಐಪಿಸಿ ಕಲಂ 399, 402ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕಾಸರಗೋಡು ನಿವಾಸಿ ಅಶ್ರಫ್ ಎಂಬಾತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ 368 ರಾಜು ನಾಯ್ಕ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ 2308 ಸಂತೋಷ್ ಅವರು ಅಶ್ರಫ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

