Saturday, September 14, 2024
Homeನಿಧನ4 ವರ್ಷದ ಮಗುವಿನ ಬದುಕಿಗೆ ಚಾಕೊಲೇಟ್ ಸೇವನೆ ಹಾನಿಕಾರವಾಯಿತೇ..?

4 ವರ್ಷದ ಮಗುವಿನ ಬದುಕಿಗೆ ಚಾಕೊಲೇಟ್ ಸೇವನೆ ಹಾನಿಕಾರವಾಯಿತೇ..?

ಚಿತ್ರದುರ್ಗ: ಚಾಕೊಲೇಟ್ ಎಂದು ಮಾತ್ರೆ ಸೇವಿಸಿ ಮಗು ಮೃತಪಟ್ಟ ಘಟನೆ ಜಿಲ್ಲೆಯ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಹೃತ್ವಿಕ್(4) ಮೃತ ಮಗು ಎಂದು ಗುರುತಿಸಲಾಗಿದೆ.

ಕಳೆದ 4 ದಿನಗಳ ಹಿಂದೆ ಮನೆಯಲ್ಲಿದ್ದ ಮಾತ್ರೆ ಸೇವಿಸಿದ್ದ ಮಗುವನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು(ಮಾ.07) ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.

ಮಗುವಿನ ತಂದೆ ತಿಪ್ಪೇಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದು ಮನೆಯಲ್ಲಿ ಮಾತ್ರೆಗಳನ್ನು ಮನೆಯಲ್ಲಿಟ್ಟಿದ್ದಾರೆ. ಮಾತ್ರೆಗಳನ್ನು ಚಾಕೋಲೆಟ್ ಎಂದು ಭಾವಿಸಿದ ಮಗು ಸೇವಿಸಿ ಮೃತಪಟ್ಟಿದೆ.

RELATED ARTICLES
- Advertisment -
Google search engine

Most Popular