ಶಿವಮೊಗ್ಗ ನಗರದ ಪಂಪ್ ಹೌಸ್‌ನಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯಿಂದಾಗಿ ಹಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಇದರಿಂದ ಕಂಗಾಲಾದ ಸಾರ್ವಜನಿಕರು ವಿಧಾನ ಪರಿಷತ್ ಸದಸ್ಯೆ (ಎಂಬಿಎಲ್) ಬಲ್ಕೀಶ್ ಬಾನು ಅವರಿಗೆ ಮನವಿ ಸಲ್ಲಿಸಿದ್ದರು.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶಾಸಕಿ ಬಲ್ಕೀಶ್ ಬಾನು ಅವರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ತಕ್ಷಣವೇ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಶಾಶ್ವತ ಸಮಸ್ಯೆ ಪರಿಹರಿಸುವ ಬಗ್ಗೆ ಗಮನಿಸಲಾಗುವುದು ಎಂದರು.

