ಗ್ರಾಮೀಣ ಪ್ರದೇಶದಲ್ಲಿ ಆಯೋಜಿಸುವಂತಹ ಇಂತಹ ಆರೋಗ್ಯ ಶಿಬಿರಗಳು ಜನರಿಗೆ ಅನುಕೂಲಕರವಾಗಿದ್ದು ಆರ್ಥಿಕ ಉಳಿತಾಯವಾಗುವಂತಹ ಕೆಲಸಗಳನ್ನು ಮಾಡುತ್ತದೆ. ಪರಿಶುದ್ಧ ಗಾಳಿ ನೀರು ಆಹಾರವನ್ನು ನಾವು ಸದ್ಬಳಕೆ ಮಾಡಿಕೊಂಡು ಆರೋಗ್ಯಕರ ಜೀವನವನ್ನು ನಡೆಸಬೇಕು ಅಂದರೆ ಜೀವನದಲ್ಲಿ ಸ್ವಚ್ಛತೆ ಹಾಗೂ ಶುದ್ಧತೆ ಅಳವಡಿಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಬಪ್ಪನಾಡು ಇದರ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್ ತಿಳಿಸಿದರು.
ಲಯನ್ಸ್ ಕ್ಲಬ್ ಬಪ್ಪನಾಡು ಇಂಸ್ಪೈರ್, ಲಿಯೋ ಕ್ಲಬ್ ಯನ್ ಇನ್ಸ್ಪೈರ್ , ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ಶಿಮಂತೂರು, ಶಿಕ್ಷಕ ರಕ್ಷಕ ಸಂಘ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ಶಿಮಂತೂರು ಇವರುಗಳ ಜಂಟಿ ಆಶ್ರಯದಲ್ಲಿ, ಎ ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು, ಎ ಬಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ , ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ* *”ಬೃಹತ್ ಆರೋಗ್ಯ ತಪಾಸಣಾ ಹಾಗೂ ದಂತ ವೈದ್ಯಕೀಯ ಶಿಬಿರದಲ್ಲಿ ಅತಿಥಿಯಾಗಿ ಪಾಲ್ಗೊಂಡ ಶುಭ ಕೋರಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಶಾರದಾ ಸೊಸೈಟಿ (ರಿ) ಶಿಮಂತೂರು ಇದರ ಕೋಶಾಧಿಕಾರಿಗಳಾದ ಕೊ. ಭುವನಾಭಿರಾಮ ಉಡುಪ, ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಗ್ರಾಮೀಣ ಬಡ ಕುಟುಂಬದ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ವಿವಿಧ ಉಚಿತ ಕಾರ್ಯಕ್ರಮಗಳನ್ನು ಆಯೋಜಿಸುವುದು ಲಯನ್ಸ್ ನ ಸಾಮಾಜಿಕ ಕಳಕಳಿಯನ್ನು ಸೂಚಿಸುತ್ತದೆ ಎಂದರು.
ಲಯನ್ಸ್ ಕ್ಲಬ್ ಬಪ್ಪನಾಡು ಇಂಸ್ಪೈರ್ ಅಧ್ಯಕ್ಷ ಶಿವಪ್ರಸಾದ್ ಶಿಬಿರವನ್ನು ಉದ್ಘಾಟಿಸಿದರು. ಶ್ರೀ ಶಾರದಾ ಸೆಂಟ್ರಲ್ ಸ್ಕೂಲು ನ ಸಂಚಾಲಕ ದೇವಪ್ರಸಾಧ್ ಪುನರೂರು, ವೈದ್ಯರಾದ ಡಾ ಕೃಷ್ಣ, ಡಾ ಶಿಲ್ಪಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಸ್ವಾಗತಿಸಿದರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶ್ಯಾಮ್ ಸುಂದರ್ ಶೆಟ್ಟಿ ವಂದಿಸಿದರು, ಶಿಕ್ಷಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು.