Sunday, July 14, 2024
Homeರಾಜಕೀಯಉಡುಪಿ ಕ್ಷೇತ್ರದ ಸರ್ಕಾರಿ ಶಾಲೆಗಳ 20,000 ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತ : ಯಶ್ ಪಾಲ್...

ಉಡುಪಿ ಕ್ಷೇತ್ರದ ಸರ್ಕಾರಿ ಶಾಲೆಗಳ 20,000 ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತ : ಯಶ್ ಪಾಲ್ ಸುವರ್ಣ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರಿ ಹಾಗೂ ಅನುದಾನಿತ ಶಾಲೆಗಳ 20,000 ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಸ್ವಾಗತಿಸುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಪುಷ್ಪಾನಂದ ಫೌಂಡೇಶನ್ ವತಿಯಿಂದ ಮೇ 31 ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 121 ಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಾಲಾ ಪುನರಾರಂಭದ ಅಂಗವಾಗಿ ಶಾಸಕರು ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾಗುವಂತೆ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular