ಸುಸಂಪನ್ನಗೊಂಡ ಶ್ರೀ ಗಾಯತ್ರಿ ಪೂಜೆ, ಉಪಾಸನೆ

0
6

ದಾವಣಗೆರೆ : ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಈ ತಿಂಗಳ ಭರತ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಯಶಸ್ವಿಯಾಗಿ ನಡೆಯಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.

ಈ ತಿಂಗಳ ಪೂಜಾ ಸೇವೆಯನ್ನು ಡಾ|| ಸುಶೀಲಮ್ಮ ಮತ್ತು ಡಾ|| ಪ್ರಜ್ವಲ್ ಸತೀಶ್ ಪಟೇಲ್ ಮತ್ತು ಕುಟುಂಬದವರು ಈ ತಿಂಗಳ ಪೂಜಾ ಸೇವೆಯನ್ನು ಸಲ್ಲಿಸಿದ್ದು ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಾಟೀಲ್, ಖಜಾಂಚಿ ಪುರುಷೋತ್ತಮ ಪಟೇಲ್, ಗೌರವ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್, ಶಿಲ್ಪಾ ಉಮೇಶ್ ದಂಪತಿಗಳು, ಸತೀಶ್ ಆರ್.ಎಂ., ವಿಕ್ರಂ ಜೈನ್, ಪ್ರಭಾ ರವೀಂದ್ರ, ಶಿವಕುಮಾರ್‌ಸ್ವಾಮಿ, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here