ಬಂಟ್ವಾಳ : ಕಾಡಿನಿಂದ ನಾಡಿಗೆ ಬಂದ ಎರಡು ಆನೆಗಳು ಬಿಳಿಯೂರು ಪರಿಸರದಲ್ಲಿ ರಾತ್ರಿಯೆಲ್ಲ ಕೃಷಿ ತೋಟಗಳಲ್ಲಿ ಸುತ್ತಾಡಿದ್ದು ಆನೆಗಳ ಆಗಮನದಿಂದ ಭಯಭೀತರಾದ ಗ್ರಾಮಸ್ಥರು ಅರಣ್ಯ ಇಲಾಖೆ ಮೊರೆ ಹೋಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಸರಳಿಕಟ್ಟೆ ನೇತ್ರಾವತಿ ನದಿಯಲ್ಲಿ ಜಲಕ್ರೀಡೆಯಲ್ಲಿ ತೊಡಗಿರುವ ಆನೆಗಳ ದೃಶ್ಯವನ್ನು ಸ್ಥಳಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಸಂಜೆ ವೇಳೆ ಬೆಳ್ತಂಗಡಿ ಮತ್ತು ಪುತ್ತೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದು , ಠಾಣಾ ಸಿಬ್ಬಂದಿಗಳು ಮತ್ತು ಗ್ರಾಮಸ್ಥರ ಸಹಕಾರದಿಂದ ಆನೆಗಳನ್ನು ಸಿಡಿಮದ್ದು ಸಿಡಿಸುವ ಮೂಲಕ ಬೆಳ್ತಂಗಡಿ ತಾಲೂಕಿನ ಸರಳಿಕಟ್ಟೆ ಮೂಲಕ ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಸಲಾಯಿತು.

